ಕಿಚ್ಚಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಅವಾರ್ಡ್

  • In Cinema
  • February 21, 2020
  • 352 Views
ಕಿಚ್ಚಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಅವಾರ್ಡ್

ಮುಂಬೈ, ಫೆ. 21: ಕನ್ನಡ ಚಿತ್ರರಂಗದಲ್ಲಷ್ಟೇ ಅಲ್ಲದೆ ಇನ್ನು ಹಿಂದಿ ವಿವಿಧ ಭಾಷೆಗಳಲ್ಲಿ ನಟಿಸಿದ ಕನ್ನಡ ಚಕ್ರವರ್ತಿ ಎಂದು ಗುರುತಿಸಿಕೊಂಡಿರುವ ಕಿಚ್ಚ ಸುದೀಪ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಸಿಕ್ಕಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಅವಾರ್ಡ್ 2020 ಸಮಾರಂಭದಲ್ಲಿ, ನಟ ಕಿಚ್ಚ ಸುದೀಪ್ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ಯನ್ನು ಸ್ವೀಕರಿಸಿದ್ದಾರೆ.

ಬಾಲಿವುಡ್ನ ಸಲ್ಮಾನ್ ಖಾನ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿರೋ ದಬಾಂಗ್- 3 ಸಿನಿಮಾದಲ್ಲಿ ಸುದೀಪ್ರವರ ಉತ್ತಮ ನಟನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರೋ ಕಿಚ್ಚ, ದಬಾಂಗ್-3 ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಹಾಗೇ ತಮ್ಮ ಕುಟುಂಬಕ್ಕೆ, ಸಹ ನಟರಿಗೆ, ಸಿನಿಮಾ ತಂತ್ರಜ್ಞರಿಗೆ, ಮಾಧ್ಯಮದವರಿಗೆ ಥ್ಯಾಂಕ್ಸ್ ಹೇಳಿದ್ದಾರೆ.

 

Related