ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಏಳು ಜನ ಆರೋಪಿಗಳ ಜಾಮೀನನ್ನು ರದ್ದು ಕೋರಿ ಆದೇಶ ಹೊರಡಿಸಿದೆ.
ಇನ್ನು ಸುಪ್ರೀಂ ಆದೇಶದಂತೆ ಏಳು ಆರೋಪಿಗಳನ್ನು ಬಂಧನಕ್ಕೆ ಒಳಪಡಿಸಬೇಕಾಗಿತ್ತು, ಅದರಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಬಂಧನಕ್ಕೂ ಮುನ್ನ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ ಪವಿತ್ರ ಗೌಡ
ಬೆಂಗಳೂರಿನ ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್ಮೆಂಟ್ನಲ್ಲಿ ಇದ್ದ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ದರ್ಶನ್ ನ್ಯಾಯಾಲಯಕ್ಕೆ ಶರಣಾಗುವ ಮೊದಲೇ ಪೊಲೀಸರು ಅಪಾರ್ಟ್ಮೆಂಟ್ಗೆ ತೆರಳಿ ಅವರನ್ನು ಅರೆಸ್ಟ್ ಮಾಡಿದ್ದಾರೆ
