ರೆಬಲ್ ಲೇಡಿ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್

ರೆಬಲ್ ಲೇಡಿ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್

ಬೆಂಗಳೂರು: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಭರ್ಜರಿ ಗೆಲುವು ಸಾಧಿಸಿದ ಹಾಲಿ ಸಂಸದೆ ಸುಮಲತಾ ಅವರು ಈಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ನಿನ್ನೆ ಮಂಡ್ಯ ಜನತೆಯ ಮುಂದೆ ಹೇಳಿದ್ದಾರೆ.

ಅದರಂತೆ ನಾಳೆ ಅಂದರೆ ಏಪ್ರಿಲ್ರೆಬಲ್ ಲೇಡಿ ಬಿಜೆಪಿ ಸೇರ್ಪಡೆಗೆ ಡೇಟ್ ಫಿಕ್ಸ್ 05ರಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅದ್ದೂರಿಯಾಗಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ, ಆರ್.‌ ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಬಿ.ಎಸ್.‌ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇನ್ನು ಇದೇ ವೇಳೆ ಸುಮಲತಾ ಅಂಬರೀಶ್ ಅವರ ಬೆಂಬಲಿಗರು ಸಹ ಬಿಜೆಪಿ ಸೇರಲಿದ್ದಾರೆ.

 

Related