ಸಮಾರಂಭಗಳಿಗೆ ಡಿಸಿ ಅನುಮತಿ ಕಡ್ಡಾಯ

ಸಮಾರಂಭಗಳಿಗೆ ಡಿಸಿ ಅನುಮತಿ ಕಡ್ಡಾಯ

ಹಾವೇರಿ : ಜಿಲ್ಲೆಯಲ್ಲಿ ಕೊರೋನಾ ವೈರಸ್ ಭೀತಿ ಹೆಚ್ಚಳವಾಗಿದ್ದು, 9 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಹಾವೇರಿ ಜಿಲ್ಲಾಧಿಕಾರಿ ಸಂಜಯ್ ಶೆಟ್ಟಣ್ಣವರ, ಜಿಲ್ಲೆಯಲ್ಲಿ ಕಾಲೇಜು ಆರಂಭದ ಬಳಿಕ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ. 9 ಮಂದಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಮದುವೆ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಪಾಲಿಸದೇ, ಮಾಸ್ಕ್ ಹಾಕದೇ ಇರುವುದರಿಂದ ಕೊರೋನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಇನ್ಮುಂದೆ ಮದುವೆ ಸಮಾರಂಭಗಳಿಗೆ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯ ಮಾಡಲಾಗಿದೆ.

Related