ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ಜ್ವರ ಹಾಗೂ ನೆಗಡಿ ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅನಾರೋಗಿದ ಕುರಿತಾಗಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಮೂರು ದಿನಗಳ ಕಾಲ ಯಾವುದೇ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ, ನಾನು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಚಿತ ಆರೋಗ್ಯ ತಪಾಸಣೆ ಶಿಬಿರ
ಡಿಕೆ ಶಿವಕುಮಾರ್ ಅವರು ತಮ್ಮ ಅನಾರೋಗ್ಯದ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದ್ರೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಡಿಕೆ ಶಿವಕುಮಾರ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಈ ಬಗ್ಗೆ ಸುರ್ಜೆವಾಲ ಟ್ವಿಟ್ಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದು ಖಚಿತವಾಗಿದೆ.
