ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಡಿಸಿಎಂ

ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಡಿಸಿಎಂ

ಬಾಗಲಕೋಟೆ : ಜಿಲ್ಲೆಯಲ್ಲಿ ನವನಗರದ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ಶನಿವಾರ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸಿದರು.

ಕೋವಿಡ್ ಸಂಕಷ್ಟದ ಕಾರಣ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಸಹಭಾಗಿತ್ವ ಇಲ್ಲದೇ ಸ್ವಾತಂತ್ರ‍್ಯೋತ್ಸವ ಆಚರಣೆ ನಡೆಯಿತು. ಖಾಲಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಿತು.

ಸ್ವಾತಂತ್ರ‍್ಯೋತ್ಸವದ ನಿಮಿತ್ತ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರ ಬದಲಿಗೆ 40 ಮಂದಿ ಕೊರೊನಾ ವಾರಿಯರ್ಸ್ಗಳನ್ನು ಗೌರವಿಸಲಾಯಿತು. ಇವರಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ, ಪೊಲೀಸರು, ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು ಒಳಗೊಂಡಿದ್ದಾರೆ.

ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿ ಆನಂದ ಹೊಸಮನಿ, ಮಹಾಲಿಂಗಪುರದ ಬಿ.ಸಿ.ಆಂಗ್ಲ ಮಾಧ್ಯಮ ಶಾಲೆಯ ರಚಿತಾ ಅನ್ವೇಕರ ಹಾಗೂ ಬಾಗಲಕೋಟೆ ವಿದ್ಯಾಗಿರಿ ಸೇಂಟ್ ಆಯನ್ಸ್ ಶಾಲೆಯ ರಾಜಶೇಖರ ರೆಡ್ಡಿ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

Related