ವೈದ್ಯಾಧಿಕಾರಿಗಳಿಗೆ ಧೈರ್ಯ ತುಂಬಿದ ಡಿಸಿಎಂ

ವೈದ್ಯಾಧಿಕಾರಿಗಳಿಗೆ ಧೈರ್ಯ ತುಂಬಿದ ಡಿಸಿಎಂ

ರಾಮನಗರ : ಕೋವಿಡ್ 19 ಹಿನ್ನೆಲೆ ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕು ಆಸ್ಪತ್ರೆಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸರ್ವಸನ್ನದ್ಧರಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಹಿರಿಯ ಅಧಿಕಾರಿಗಳ ಜತೆ ಆಸ್ಪತ್ರೆಗಳಿಗೆ ಭೇಟಿ ನೀಡಿದ ಅವರು, ತಾಲ್ಲೂಕು ವೈದ್ಯರ ಜತೆ ಚರ್ಚೆ ನಡೆಸಿದರಲ್ಲದೆ, ಅವರ ಕಾರ್ಯವೈಖರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಆದರೂ, ಎಚ್ಚರ ತಪ್ಪಬಾರದು ಎಂದು ಖಡಕ್ಕಾಗಿ ಸೂಚಿಸಿದರು. ಇದೇ ವೇಳೆ ವೈದ್ಯರು, ನರ್ಸ್ಗಳು, ಪೂರಕ ಸಿಬ್ಬಂದಿ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು.

ಉಳಿದಂತೆ, ಗಂಟಲು ದ್ರವ ಸಂಗ್ರಹ, ಆಂಬುಲೆನ್ಸ್ ಗಳು, ಔಷಧಿ, ಫೀವರ್ ಕ್ಲಿನಿಕ್ಕುಗಳು ಮುಂತಾದ ಅಂಶಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದ ಅವರು, ಜಿಲ್ಲೆಯಲ್ಲಿ ಕೋವಿಡ್ ಎದುರಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಪಾಸಿಟೀವ್ ಬಂದಿರುವ ರೋಗಿಗಳಿಗೆ ಚನ್ನಪಟ್ಟಣ, ಮಾಗಡಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗದು. ಅವರನ್ನು ರಾಮನಗರ ಆಸ್ಪತ್ರೆ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ಕಾಲೇಜ್, ದಯಾನಂದ ಸಾಗರ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದರು.

Related