ಯಾದಗಿರಿ: ಜಿಲ್ಲೆಯ ಗುರುಮಿಠಕಲನ ಇಂದಿರಾ ನಗರದಲ್ಲಿ ಚಿಂದಿ ಆಯಿಯಲು ತೆರಳುತ್ತಿದ್ದ ಇಬ್ಬರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ ನೀಲಹಳ್ಳಿ ಗ್ರಾಮದ ಕೆರೆಯಲ್ಲಿ ಎಸೆದು ಹೋಗಿದ್ದು ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂದಿಸಬೇಕು ಎಂದು ಭಾರತೀಯ ಯುವ ಕಾಂಗ್ರೆಸ್ ಜಂಟಿ ಕಾರ್ಯದರ್ಶಿ ಚರಿತಾ ಕೊಂಕಲ್ ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಬೇಜವಾಬ್ದಾರಿತನವನ್ನು ತೋರಿಸುತ್ತಿದ್ದು ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದು ಮರಣ ಹೊಂದಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಅಲ್ಲಿ ನಡೆದ ವಾಸ್ತವ ಘಟನೆಯೇ ಬೇರೆ ಇದ್ದು, ಈ ಕುರಿತು ಸೂಕ್ತ ತನಿಖೆ ಆಗಬೇಕು ಆರೋಪಿಗಳು ಯಾರೇ ಆಗಿದ್ದರೂ ಸಹ ಗಲ್ಲು ಶಿಕ್ಷೆ ವಿಧಿಸಬೇಕು. ಆದ್ದರಿಂದ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಆರೋಪಿಗಳನ್ನು ಪತ್ತೆ ಹಚ್ಚಿ ಬಂದಿಸಬೇಕು ಕೊಲೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
