ರಾಜ್ಯದ ರೈತರಿಗೆ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

ರಾಜ್ಯದ ರೈತರಿಗೆ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಲು ಡಿ.31 ಕೊನೆ ದಿನ

ಬೆಂಗಳೂರು: ರಾಜ್ಯದಲ್ಲಿರುವ ರೈತರಿಗೆ ಸರಕಾರ ಸಿಹಿ ಸುದ್ದಿಯನ್ನು ನೀಡಿದ್ದು ಈ ಬಾರಿ ಕೃಷಿ ಭಾಗ್ಯ ಯೋಜನೆ ಅಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಇದೇ ಡಿಸೆಂಬರ್ 31 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದ್ದು ರೈತರು ಡಿಸೆಂಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದೆಂದು ತಿಳಿದು ಬಂದಿದೆ.

ಹೌದು, ರಾಜ್ಯದ ರೈತರಿಗೆ ಈ ಬಾರಿ 2023-24 ನೇ ಸಾಲಿನಲ್ಲಿ ವಿವಿಧ ಘಟಕಗಳ ಸೌಲಭ್ಯ ಪಡೆಯಲು ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯ ನಮೂನೆಗಳು ಸಮೀಪದ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತವೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಸೌಲಭ್ಯಗಳನ್ನು ಪಡೆಯಲು ಬೇಕಾದ ಅರ್ಹತೆಗಳೇನು?

ರೈತರು ಕನಿಷ್ಟ 1 ಎಕರೆ ಜಮೀನನ್ನು ಹೊಂದಿರಬೇಕು. ಈ ಯೋಜನೆಯು ಒಣ ವಲಯ ಕ್ಷೇತ್ರದ ರೈತರಿಗೆ ಮಾತ್ರ ಸಂಬಂಧಪಟ್ಟಿರುತ್ತದೆ.

ಕೃಷಿ ಭಾಗ್ಯದಲ್ಲಿ ಯಾವೆಲ್ಲಾ ಸವಲತ್ತು ಪಡೆಯಬಹುದು?

ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್/ ಪೆಟ್ರೋಲ್ ಪಂಪ್ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ ಸೇರಿದಂತೆ ನಾನಾ ಸೌಲಭ್ಯಗಳನ್ನು ನಿಯಮಾನುಸಾರ ನೀಡಲಾಗುವುದು.

ಒಂದುವೇಳೆ ಸಂಬಂಧಪಟ್ಟ ತಾಲೂಕಿಗೆ / ಹೋಬಳಿಗೆ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತವಾದರೆ ಲಾಟರಿ ಎತ್ತುವ ಮೂಲಕ ಫಲಾನುಭವಿಗಳನ್ನು ಗುರಿಗಳನ್ವಯ ಆಯ್ಕೆ ಮಾಡಲಾಗುತ್ತದೆ.

ರೈತರು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳ ಸಂದಿಗ್ಧ ಹಂತದಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಕೃಷಿ ಭಾಗ್ಯ ಯೋಜನೆಯ ಉದ್ದೇಶವಾಗಿದ್ದು, ಮೇಲೆ ತಿಳಿಸಿದ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದು ಕೊಪ್ಪಳ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related