ಸರಳ ರಾಜ್ಯೋತ್ಸವ ಆಚರಣೆಗೆ ನಿರ್ಧಾರ!

ಸರಳ ರಾಜ್ಯೋತ್ಸವ ಆಚರಣೆಗೆ ನಿರ್ಧಾರ!

ಬಾಗಲಕೋಟೆ : ಕೊರೋನಾ ಹಿನ್ನಲೆಯಲ್ಲಿ ನವೆಂಬರ 1 ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸ ಆಚರಣೆ ಕುರಿತ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ಬೆಳಿಗ್ಗೆ 9 ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮ ಸಿದ್ದತೆಗೆ 9 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮ ರೂಪು ರೇಶೆಗಳನ್ನು ತಯಾರಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

Related