ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ: ಪರಮೇಶ್ವರ್

ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ: ಪರಮೇಶ್ವರ್

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಕಾನೂನಾತ್ಮಕವಾಗಿ ಮೀಸಲಾತಿ ಕೊಡಬೇಕಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಹೇಳಿದ್ದಾರೆ,

ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇವೆ. ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ಮಾಡಲಾಗಿತ್ತು.  ನ್ಯಾ ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನ ಮಾಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ವರದಿ ತಿರಸ್ಕಾರ ಮಾಡಿದ್ದರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನ ತಿದ್ದುಪಡಿ ತರಲು ಆಗಲ್ಲ. ಹೀಗಾಗಿ ಶಿಫಾರಸ್ಸು ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

 

Related