ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರ ಹಾಗೂ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ರೈತರಿಗೆ ವಂಚಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿದ್ದರು.
ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರಿಗೆ ನಿರಂತರ ಕಿರುಕುಳ ನೀಡುತ್ತಾ, ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಲಾಯಿತು.
ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ
ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಇದನ್ನೂ ಓದಿ: ಹಿಂಗುಲಾಂಭಿಕಾ ದೇವಸ್ಥಾನಕ್ಕೆ ಅನುದಾನ ಭರವಸೆ
