ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ಮಂಡ್ಯ : ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದ ರೈತರಿಂದ ಪ್ರತಿಭಟನೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕೇಂದ್ರ ವಿರೋಧಿ ನೀತಿಗಳನ್ನು ಕೈ ಬೀಡಬೇಕು, ಕೆ.ಆರ್.ಎಸ್. ಅಣೆಕಟ್ಟು ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧ ಮಾಡಬೇಕು, ಮೈಶುಗರ್ ಸಕ್ಕರೆ ಕಾರ್ಖಾನೆ ತಕ್ಷಣವೇ ಪ್ರಾರಂಭಿಸಬೇಕು, ಬೆಳೆ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

Related