ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಗ್ಯೂ

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕಣಗಳು ಹೆಚ್ಚಾಗುತ್ತಿದ್ದು ಇದರಿಂದ ಜನ ಆತಂಕಕ್ಕೆ ಒಳಪಡುವಂತಾಗುತ್ತಿದೆ. ಈಗಾಗಲೇ ಡೆಂಗ್ಯೂ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ಇನ್ನು ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಕೇವಲ ಒಂದು ತಿಂಗಳಲ್ಲಿ 3,797 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಪ್ರಕರಣಗಳ ಒಟ್ಟು ಸಂಖ್ಯೆ 10 ಸಾವಿರ ಗಡಿ ದಾಟಿದೆ.

ರಾಜ್ಯದಲ್ಲಿ ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಅವರಲ್ಲಿ 70 ಸಾವಿರಕ್ಕೂ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 5,756 ಹಾಗೂ ಇತರೆ ಜಿಲ್ಲೆಗಳಲ್ಲಿ 4,504 ಸೇರಿ ರಾಜ್ಯಾದ್ಯಂತ 10,260 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 23,191 ಶಂಕಿತರನ್ನ ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 18,378 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳಲ್ಲಿ 2,302 ಮಂದಿಯಲ್ಲಿ ಸೋಂಕು ವರದಿಯಾಗಿದೆ.

Related