ಕಂದಾಯ ಇಲಾಖೆಯಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ

ಕಂದಾಯ ಇಲಾಖೆಯಲ್ಲಿ ಶೀಘ್ರದಲ್ಲೇ ಡಿಜಿಟಲೀಕರಣ ವ್ಯವಸ್ಥೆ

ಬೆಳಗಾವಿ: ಶೀಘ್ರದಲ್ಲೇ ಕರ್ನಾಟಕ ರಾಜ್ಯದಲ್ಲಿ ಕಂದಾಯ ಇಲಾಖೆ ಕಚೇರಿಗಳಲ್ಲಿ ಡಿಜಿಟಲೀಕರಣಗೊಳ್ಳಲಿವೆ ಎಂದು ಕಂದಾಯ ಸಚಿವರು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯಲ್ಲಿ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆಗಳನ್ನು ಜನರಿಗೆ ಪಡೆಯಲು ಸಿಕ್ಕಪಟ್ಟೆ ತೊಂದರೆಯಾಗುತ್ತಿದೆ ಆ ಕಾರಣದಿಂದ ರಾಜ್ಯದ ಜನತೆಯ ಒಳತಿಗಾಗಿ ಶೀಘ್ರದಲ್ಲೇ ಕಂದಾಯ ಇಲಾಖೆಯಲ್ಲಿ ಶಿಥಿಲಾವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಸಾರ್ವಜನಿಕರಿಗೆ ಶಾಶ್ವತವಾಗಿ ಸಂರಕ್ಷಿಸುವುದು ಮತ್ತು ನಕಲಿ ಸೃಷ್ಟಿಗೆ ತಡೆಯೊಡ್ಡುವ ಸಲುವಾಗಿ 31 ಜಿಲ್ಲೆಗಳ ತಲಾ ಒಂದು ತಾಲ್ಲೂಕಿನಲ್ಲಿ ಪ್ರಥಮ ಹಂತವಾಗಿ ಯೋಜನೆಗೆ ಚಾಲನೆ ಕೊಡಲಾಗುತ್ತಿದೆ. ಎಲ್ಲ ದಾಖಲೆಗಳನ್ನು 100 ದಿನಗಳಲ್ಲಿ ಡಿಜಿಟಲೀಕರಣ ಮಾಡಲಾಗುವುದು ಎಂದು ಹೇಳಿದರು.

ಇನ್ನು ನಾನು ಕಂದಾಯ ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ತಹಶೀಲ್ದಾರ್, ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿನ ಹೆಚ್ಚಿನ ಪ್ರಕರಣ ಬಾಕಿ ಇದ್ದವು. ಈಗ ತ್ವರಿತವಾಗಿ ಪ್ರಕರಣ ಇತ್ಯರ್ಥ ಮಾಡಲಾಗುತ್ತಿದೆ. ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಇದ್ದ 2,215 ಪ್ರಕರಣಗಳಲ್ಲಿ ಈಗ 107 ಮಾತ್ರ ಉಳಿದಿವೆ. ಸಹಾಯಕ ಆಯುಕ್ತರ ನ್ಯಾಯಾಲಯಗಳಲ್ಲಿನ 60 ಸಾವಿಕ್ಕೂ ಅಧಿಕ ಪ್ರಕರಣಗಳಲ್ಲಿ 34,377 ಇತ್ಯರ್ಥವಾಗಿವೆ  ಎಂದರು.

 

Related