ಮಾನಸಿಕ ಸ್ಥಿಮಿತ ಕಳೆದುಕೊಂಡ ಡಿಕೆಶಿ, ಸಿದ್ದು

ಮಾನಸಿಕ ಸ್ಥಿಮಿತ ಕಳೆದುಕೊಂಡ ಡಿಕೆಶಿ, ಸಿದ್ದು

ಶಿವಮೊಗ್ಗ : ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಮನಗಂಡಿದ್ದಾರೆ. ಅವರು ಭಯದಲ್ಲಿ ಅತಂತ್ರ ಸ್ಥಿತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಇಂದಿನ ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚಿಸಲಾಗುವುದು. ನಾಳಿನ ವಿಶೇಷ ಸಭೆಯಲ್ಲೂ ಚರ್ಚೆ ನಡೆಸಲಾಗುವುದು. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಕಾರ್ಯಕಾರಣಿ ಹಾಗೂ ವಿಶೇಷ ಸಭೆ ಇರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ರಾಜಿನಾಮೆ ನೀಡುವುದು ಒಳ್ಳೆಯದು ಎಂದು, ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

Related