ನಾಳೆ ವಯನಾಡಿನಲ್ಲಿ ಡಿಕೆಶಿ ಮತ ಬೇಟೆ

ನಾಳೆ ವಯನಾಡಿನಲ್ಲಿ ಡಿಕೆಶಿ ಮತ ಬೇಟೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು ನಾಳೆ ವಯನಾಡಿನಲ್ಲಿ ಪ್ರಚಾರ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ದೇಶದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ನಾಳೆ ನಾನು ವಯನಾಡಿಗೆ ಹೋಗಿ ಪ್ರಚಾರ ಮಾಡಲಿದ್ದೇನೆ. ರಾಹುಲ್ ಗಾಂಧಿ ಅವರು ಯಾವುದಕ್ಕೂ ಹೆದರುವುದಿಲ್ಲ. ಅವರೊಬ್ಬ ಹೋರಾಟಗಾರ. ಅವರ ಪರಿಶ್ರಮ ಅವರಿಗೆ ತಕ್ಕ ಫಲ ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.

ಬೆಂಗಳೂರಿನ ಅಪಾರ್ಟ್ ಮೆಂಟ್ ನಿವಾಸಿಗಳಾಗಲಿ ಅಥವಾ ಬೇರೆಯವರ ಸಮಸ್ಯೆಗಳನ್ನು ನಿವಾರಣೆ ಮಾಡುವುದು ನನ್ನ ಕರ್ತವ್ಯ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನಮ್ಮ ಪಕ್ಷದ ಗ್ಯಾರಂಟಿ ಮುಂದುವರಿಯುವುದಿಲ್ಲ ಎಂದು ಹೇಳುವ ಮೂಲಕ ಮತದಾರರನ್ನು ಬೆದರಿಸುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಇರಲಿದ್ದು, ಅದು ಮತ್ತೈದು ವರ್ಷ ಮುಂದುವರಿಯಲಿದೆ. ಈ ಸರ್ಕಾರ ಇರುವುದು 5 ವರ್ಷಕ್ಕಲ್ಲ, 10 ವರ್ಷಕ್ಕೆ. ಕೇಂದ್ರದಲ್ಲೂ ನಮ್ಮ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಅವರ ಸರ್ಕಾರ ಹೋಯಿತು, ಕೇಂದ್ರದಲ್ಲೂ ಅವರ ಸರ್ಕಾರ ಹೋಗಲಿದೆ ಎಂಬ ಹತಾಶೆ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ. ಗ್ಯಾರಂಟಿ ಯೋಜನೆ ವಿಚಾರವಾಗಿ ವಿಜಯೇಂದ್ರ ಅವರು ಹೇಳಿರುವ ಹೇಳಿಕೆ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.

 

Related