ನಾಮಪತ್ರ ವಾಪಸ್  ಪಡೆದ ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ವಾಪಸ್  ಪಡೆದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ: ಲೋಕಸಭಾ ಚುನಾವಣೆಗೆ ಕರ್ನಾಟಕ ರಾಜ್ಯದಲ್ಲಿ ದಿನಗಡನೆ ಪ್ರಾರಂಭವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗುತ್ತಿದೆ.

ಹೌದು, ಧಾರವಾಡ ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಪ್ರಲ್ಹಾದ್‌ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ತಾವು ಸಲ್ಲಿಸಿದ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ.

ಇದರಿಂದ ಧಾರವಾಡ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರಿಗೆ ಕೊಂಚ ರಿಲೀಫ್ ಆದಂತಿದೆ.

ಕೇಂದ್ರ ಸಚಿವರಾಗಿ ನಮ್ಮ ರಾಜ್ಯದಲ್ಲಿರುವ ಲಿಂಗಾಯತ ಸಮುದಾಯಕ್ಕೆ ಜೋಶಿ ಅವರು ಅನ್ಯಾಯ ವಸಗಿದ್ದಾರೆ ಎಂಬ ಕಾರಣಕ್ಕೆ ಲೋಕಸಭಾ ಚುನಾವಣೆಗೆಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದಿಂಗಾಲೇಶ್ವರ ಸ್ವಾಮೀಜಿ ಅವರು, ಈಗ ತಮ್ಮ ಹಠವನ್ನು ಬಿಟ್ಟು ನಾಮಪತ್ರವನ್ನು ಹಿಂಪಡೆದಿದ್ದಾರೆ.

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ. ಇನ್ನು ಪ್ರಹ್ಲಾದ್‌ ಜೋಶಿ ಹಾಗೂ ವಿನೋದ್‌ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ.

ಈ ಸಂಬಂಧ ಧಾರವಾಡದ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಸಭೆ ಕರೆದಿದ್ದು, ಅವರ ಜೊತೆ ಸಭೆ ನಡೆಸಿ ತಮ್ಮ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ. ಅದಾದ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ವಾಪಸ್‌ ಪಡೆದಿದ್ದಾರೆ.

Related