Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಥಗ್‌ ಲೈಫ್ ಸಿನಿಮಾ ತಂಡಕ್ಕೆ ನಿರಾಸೆ
  • Cinema
  • National

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಥಗ್‌ ಲೈಫ್ ಸಿನಿಮಾ ತಂಡಕ್ಕೆ ನಿರಾಸೆ

admin June 9, 2025
Spread the love

ಬೆಂಗಳೂರು: ಕನ್ನಡ ಭಾಷೆ ತಮಿಳುನಿಂದ ಹುಟ್ಟಿದೆ ಎಂಬ ಹೇಳಿಕೆಗೆ ಇಡೀ ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದ ನಟ ಕಮಲ್ ಹಾಸನ್ ಗೆ ಥಗ್‌ ಲೈಫ್ ಸಿನಿಮಾ ಬಿಡುಗಡೆಗೆಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆ ನಿರಾಕರಿಸಿದ.

ಸುಪ್ರೀಂ ಕೋರ್ಟ್ ಅರ್ಜಿ ನೀರಾಕರಿಸಿರುವುದರಿಂದ ಥಗ್‌ ಲೈಫ್ ಸಿನಿಮಾ ತಂಡಕ್ಕೆ ನಿರಾಸೆ ಉಂಟಾಗಿದೆ. ಥಗ್‌ ಲೈಫ್ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅವರ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಆದರೆ ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆಗೆ ನಿರಾಕರಿಸಿದೆ. ಕಮಲ್ ಹಾಸನ್ ಅಭಿನಯದ ಥಗ್‌ ಲೈಫ್ ಸಿನಿಮಾ ಕಳೆದ ಜೂನ್ 5ರಂದು ವರ್ಲ್ಡ್ ವೈಡ್‌ ರಿಲೀಸ್ ಆಗಿತ್ತು. ಆದರೆ ಕನ್ನಡಿಗರ ಹೋರಾಟ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಒಂದು ವೇಳೆ ಕರ್ನಾಟಕದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆಯಾದ್ರೆ ಬಂದ್ ಮಾಡುವ ಎಚ್ಚರಿಕೆಯನ್ನು ಹೋರಾಟಗಾರರು ನೀಡಿದ್ದರು.

ಕನ್ನಡ ಸಂಘಟನೆಗಳ ಹೋರಾಟದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಅವರ ಚಿತ್ರತಂಡ ಹೈಕೋರ್ಟ್‌ಗೆ ಭದ್ರತೆ ನೀಡುವಂತೆ ಮನವಿ ಮಾಡಿತ್ತು. ಆದರೆ ಹೈಕೋರ್ಟ್ ಕ್ಷಮೆ ಕೇಳಿದ್ದರೆ ಮುಗಿದೇ ಹೋಗುತ್ತಿತ್ತು ಅಲ್ವಾ ಎಂದು ವಿಚಾರಣೆಯನ್ನು ಮುಂದೂಡಲಾಗಿತ್ತು. ಇದನ್ನೂ ಓದಿ: ಕಮಲ್ ಹಾಸನ್ ಗೆ ಹೈಕೋರ್ಟ್ ಜಡ್ಜ್ ತರಾಟೆಗೆ ತೆಗೆದುಕೊಂಡಿದ್ಯಾಕೆ?

ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿರುವುದರಿಂದ ಥಗ್‌ ಲೈಫ್ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆ ಮತ್ತು ಕರ್ನಾಟಕದಲ್ಲಿ ಪೊಲೀಸ್ ರಕ್ಷಣೆಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ ತಕ್ಷಣವೇ ತಮ್ಮ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

About the Author

admin

Administrator

Visit Website View All Posts

Spread the love

Post navigation

Previous: ಬಾಯ್ ಫ್ರೆಂಡ್ ಅವೈಡ್ ಮಾಡಿದ್ದೇ ಕೊ*ಲೆಗೆ ಕಾರಣವಾಯ್ತಾ?
Next: ಸಿದ್ದರಾಮಯ್ಯ ಅವರು ಅಧಿಕಾರಕ್ಕಾಗಿ ಸಿಎಂ ಆಗಿದ್ದಾರೆ ಹೊರತಾಗಿ ಜನಸಾಮಾನ್ಯರಿಗಲ್ಲ: ನಿಖಿಲ್

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.