ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನದ

ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಅಸಮಾಧಾನದ

ಬೆಂಗಳೂರು,ನ. 29: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನಲ್ಲಿ ಸಚಿವ ಸ್ಥಾನ ವಂಚಿತರು ಹಾಗೂ ಸಚಿವರ, ಶಾಸಕರ ನಡುವಿನ ಅಸಮಾಧಾನದ ಕಿಚ್ಚು ಸ್ಪೋಟಗೊಂಡಿದ್ದು, ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಕಾಂಗ್ರೆಸ್‌ ನಾಯಕರಿಗೆ ದೊಡ್ಡ ತಲೆನೋವಾಗಿದೆ.

ಹೌದು, ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ.ಈ ಹಿಂದೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬಸವರಾಜ ರಾಯರೆಡ್ಡಿ, ಬಿ ಕೆ ಹರಿಪ್ರಸಾದ್‌ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಹಾಗೂ ಹೈಕಮಾಂಡ್‌ ನಾಯಕರ ವಿರುದ್ದ ಅಸಮಾಧಾನಕ್ಕೆ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗುತ್ತಾರಾ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಹಿಂದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್‌ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದಾರೆ.

ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಾನು ರಾಜೀನಾಮೆ ನೀಡುತ್ತೇನೆ ಎಂದು ಆಳಂದ ಕಾಂಗ್ರೆಸ್‌ ಶಾಸಕ ಬಿ ಆರ್‌ ಪಾಟೀಲ್‌ ಹೇಳಿದ್ದು, ಲೋಕಸಭಾ ಚುನಾವಣಾ ಹೊತ್ತಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗೆ ದೊಡ್ಡ ಸವಾಲಾಗಿ ಪರಿಣಾಮಿಸಿದೆ. ಆಳಂದ ಕಾಂಗ್ರೆಸ್ಚ ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಈ ಸಂಬಂಧ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

Related