ಕಾಂಗ್ರೆಸ್ ಅಭ್ಯರ್ಥಿಗಳಿಗೆ ಫಾರಂ ವಿತರಣೆ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಫಾರಂ ವಿತರಣೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನೆನ್ನೆಯಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿ ಫಾರಂ ವಿತರಣೆ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣ ಗೌಡ (ಸ್ಟಾರ್ ಚಂದ್ರು) ಅವರಿಗೆ ಹಾಗೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಹಾಗೂ ತುಮಕೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶುಕ್ರವಾರ ಬಿ ಫಾರಂ ವಿತರಿಸಿದರು.

Related