ಮೃತಪಟ್ಟ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

ಮೃತಪಟ್ಟ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ

ದಾಸರಹಳ್ಳಿ: ಕೊರೊನಾ ನಿಂದಗಿ ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಬಡವರ ಕಷ್ಟಕ್ಕೆ ಸ್ಪಂದಿಸದೆ ದಿನನಿತ್ಯದ ವಸ್ತುಗಳ ಮೇಲೆ ಬೆಲೆ ಹೇರಿಕೆ ಮಾಡುತ್ತಿದೆ ಎಂದು ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ತಿಳಿಸಿದರು. ಹೆಗ್ಗನಹಳ್ಳಿ ವಾರ್ಡ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ಬಡವರಿಗೆ ಶನಿವಾರ ದಿನಸಿ ಪದಾರ್ಥಗಳ ಕಿಟ್‌ಗಳನ್ನು ವಿತರಿಸಲಾಯಿತು.
ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ಬಳಿಕ ಮಾತನಾಡಿದ ರಾಜ್ಯ ಸರ್ಕಾರ ನೀಡಿರುವ ಕೊರೊನಾ ನಿಯಮಗಳನ್ನು ನಾವೆಲ್ಲರೂ ಪಾಲಿಸುತ್ತಿದ್ದೇವೆ. ಜನಸಾಮಾನ್ಯರು ಕೂಡ ಕೊರೋನಾ ನಿಯಮಗಳನ್ನು ಪಾಲಿಸಬೇಕು. ಇದರಿಂದ ತಜ್ಞರು ಹೇಳುವ ಪ್ರಕಾರ ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಾಗಿ ಬರುತ್ತಿದೆ, ಪೋಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತಿಯನ್ನು ವಹಿಸಬೇಕು, ಧನ್ವಂತರಿ ಮೆಡಿಕಲ್ ಕಾಲೇಜಿನಲ್ಲಿ ಸುಮಾರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಸರ್ಕಾರ ಶಾಲೆಗಳನ್ನು ತೆರೆಯುವ ಮುನ್ನ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು, ಮಕ್ಕಳಿಗೆ ಕೋರೋನ ಲಸಿಕೆಯನ್ನು ನೀಡುವಂತಹ ಕೆಲಸ ಮಾಡಬೇಕು ಎಂದು ತಿಳಿಸಿದರು. ಹೆಗ್ಗನಹಳ್ಳಿ ವಾರ್ಡ್ ಅಧ್ಯಕ್ಷ ಎನ್. ರಮೇಶ್ ಗೌಡ ನಮ್ಮ ವಾರ್ಡ್ ನ ಬಡಜನರಿಗೆ ನಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ. ಕೊರೊನಾದಿಂದ ಮೃತರಾದವರಿಗೆ, ಬಡವರಿಗೆ ದಿನಸಿ ಪದಾರ್ಥಗಳ ಕೀಟ್‌ಗಳನ್ನು ನೀಡಲಾಗುತ್ತದೆ. ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ಮಾಡಲಾಗುತ್ತಿದೆ. ಕೊರೊನದಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರುಗಳಾದ ಅಮರೇಶ್, ಗಂಗಾ ಚೆಲುವಯ್ಯ, ನಾಗರಾಜು, ಅನಂತ್ ಕುಮಾರ್, ಪುಷ್ಪ, ಹೇಮ ರಾಜೇಂದ್ರ, ತಾಸಿನಾ ಇನ್ನು ಮುಂತಾದವರು ಇದ್ದರು. :ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಹಾಗೂ ಬಡವರಿಗೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ಹೆಗ್ಗನಹಳ್ಳಿ ವಾರ್ಡ್ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಸದಸ್ಯ ಕೃಷ್ಣಮೂರ್ತಿ ವಿತರಿಸಿದರು. ಈ ಸಂದರ್ಭದಲ್ಲಿ ಹೆಗ್ಗನಹಳ್ಳಿ ವಾರ್ಡ್ ಅಧ್ಯಕ್ಷ ಎನ್.ರಮೇಶ್ ಗೌಡ ಇನ್ನು ಮುಂತಾದ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಇದ್ದರು.

Related