ಹಾಲಿನ ಪೌಡರ್ ವಿತರಣೆ

ಹಾಲಿನ ಪೌಡರ್ ವಿತರಣೆ

ಕೆ.ಆರ್.ನಗರ-ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಭೌದ್ದಿಕ ಬೆಳವಣಿಗೆಗೆ ದೈಹಿಕ ಸಾಮರ್ಥ್ಯವೂ ಸಹ ಅವಶ್ಯಕವಾಗಿದ್ದು ಈ ದಿಸೆಯಲ್ಲಿ ಸರ್ಕಾರ ಪೌಷ್ಠಿಕವಾದ ಹಾಲಿನ ಪೌಡರ್ ನೀಡುತ್ತಿದ್ದು ಮಕ್ಕಳು ಹಾಲನ್ನು ಕುಡಿದು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಎಸ್‌ಡಿಎಂಸಿ ಅಧ್ಯಕ್ಷ ರವಿ ಹೇಳಿದರು.
ಸಾಲಿಗ್ರಾಮ ತಾಲೂಕಿನ ಬಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಮಪರ್ಕವಾದ ಶಿಕ್ಷಣದಿಂದ ವಂಚಿತರಾಗುವುದಲ್ಲದೆ ದೇಹಕ್ಕೆ ಬೇಕಾದ ಪೌಷ್ಠಿಕ ಆಹಾರದಿಂದಲೂ ವಂಚಿತರಾಗಿದ್ದು ಇಂತಹ ಸಂದರ್ಭದಲ್ಲಿ ಮಕ್ಕಳ ದೈಹಿಕ ಸಾಮರ್ಥ್ಯವನ್ನು ಮತ್ತಷ್ಠು ಹೆಚ್ಚಿಸಲು ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದರು.
ವಿದ್ಯಾರ್ಥಿಗಳು ಇಂತಹ ಸವಲತ್ತುಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಉತ್ತಮ ವ್ಯಾಸಂಗ ಮಾಡುವ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ತಾವು ಓದಿದ ಶಾಲೆ, ಶಿಕ್ಷಕರು ಮತ್ತು ಪೋಷಕರು ಹೆಸರನ್ನು ಮುಗಿಲೆತ್ತರಕ್ಕೆ ಏರಿಸಬೇಕೆಂದರು. ಪೋಷಕರು ಸಹ ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವ ಮೂಲಕ ಆ ಶಾಲೆಗಳ ಉಳಿವಿನ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳಸುವ ಕೆಲಸ ಮಾಡಬೇಕೆಂದು ಎಸ್‌ಡಿಎಂಸಿ ಅಧ್ಯಕ್ಷ ಮನವಿ ಮಾಡಿದರು.
ಮುಖ್ಯ ಶಿಕ್ಷಕ ರಘು, ಶಿಕ್ಷಕರಾದ ಜಗದೀಶ್, ಶಬಾನಾಬಾನು, ಸವಿತಾ, ಕುಮಾರ್, ವೆಂಕಟೇಶ್ ಹಾಗೂ ಪೋಷಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related