ಜನರನ್ನು ಆತಂಕಕ್ಕೆ ದೂಡಿದ ಸರ್ಕಾರ

ಜನರನ್ನು ಆತಂಕಕ್ಕೆ ದೂಡಿದ ಸರ್ಕಾರ

ಬೆಂಗಳೂರು: ಸರ್ಕಾರ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಮತ್ತು ಗೊಂದಲ ಹೆಚ್ಚಾಗಿದೆ. ಬೆಂಗಳೂರು ತೊರೆದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸರ್ಕಾರದಲ್ಲಿ ಅನೇಕ ಗೊಂದಲಗಳಿವೆ. ಅವರು ಯಾರನ್ನು ನಂಬುವ ಪರಿಸ್ಥಿತಿಯಲ್ಲಿಲ್ಲ. ಕೋವಿಡ್ ಪಿಡುಗನ್ನು ಪಕ್ಷಾತೀತವಾಗಿ ಎದುರಿಸಬೇಕು ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಆದರೆ ಬಿಜೆಪಿ ಮಾತ್ರ ಈ ವಿಚಾರದಲ್ಲಿ ರಾಜಕೀಯ ತೋರುತ್ತಿದೆ. ನಮ್ಮನ್ನು ಕರೆಸಿ ಚರ್ಚಿಸಿದರೆ ನಾವು ಮಾತನಾಡುತ್ತೇವೆ ಎಂದು ಹೇಳಿದರು.

ಬಿಜೆಪಿ  ತಮ್ಮ ಪಕ್ಷದ ಕಾರ್ಯಕರ್ತರನ್ನು ಸ್ವಯಂ ಸೇವಕರಾಗಿ ನೇಮಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ವಿಚಾರವಾಗಿ ನಾನು ಸಿಎಂಗೆ ಪತ್ರ ಬರೆದಿದ್ದು, ನಮ್ಮ ಕಾರ್ಯಕರ್ತರು ಆರಂಭದಿಂದ ಜನರ ಸೇವೆ ಮಾಡುತ್ತಿದ್ದು, ಸರ್ಕಾರದ ಜತೆಗೂಡಿ ಕೆಲಸ ಮಾಡಲು ಸಿದ್ಧ ಎಂದರು.

Related