ʼಲೋಕಸಮರʼ ಯುದ್ಧಕ್ಕೆ ಕಹಳೆ ಊದಲು ಸಜ್ಜಾದ ಡಿಕೆ ಸುರೇಶ್..!

ʼಲೋಕಸಮರʼ ಯುದ್ಧಕ್ಕೆ ಕಹಳೆ ಊದಲು ಸಜ್ಜಾದ ಡಿಕೆ ಸುರೇಶ್..!

ರಾಮನಗರ: ಇಂದಿನಿಂದ ಲೋಕಸಭಾ ಚುನಾವಣೆಗೆ ನಾಮ ಪತ್ರಿಕೆ ಸಲ್ಲಿಕೆ ಪ್ರಾರಂಭವಾಗಿದ್ದು ಮೊದಲ ದಿನವೇ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಡಿಕೆ ಸುರೇಶ್ ಅವರ ವಿರುದ್ಧ ಈ ಬಾರಿ ಡಾ. ಮಂಜುನಾಥ್ ಅವರು ಮೈತ್ರಿ ಅಭ್ಯರ್ಥಿಯಾಗಿರುವುದರಿಂದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವು ಇಡೀ ರಾಜ್ಯದಲ್ಲೇ ಅತಿ ರಣರಂಗದ ಕ್ಷೇತ್ರವಾಗಿ ಪರಿಣಮಿಸಿದೆ.

ಹೌದು..ಇಂದಿನಿಂದ ಲೋಕಸಭಾ ಚುನಾವಣಾ ರಣಕಣ ರಂಗೇರಲಿದ್ದು, ಮೊದಲ ಹಂತದ ಚುನಾವಣಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾಗಲಿರುವ ರಾಜ್ಯದ ಮತದಾರರು. ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕಡೇ ದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ನಾಮಪತ್ರ ವಾಪಸ್‌ಗೆ ಕಡೇ ದಿನವಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಮಮತ್ರ ಸಲ್ಲಿಸಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ ಸಿಎನ್‌ ಮಂಜುನಾಥ್‌ ಅವರು ಕಣಕ್ಕಿಳಿದಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಅಳಿಯ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಬಡ ರೋಗಿಗಳ ಪಾಲಿನ ಭರವಸೆಯಾಗಿ ಬದಲಾಯಿಸಿದ ಡಾ.ಮಂಜುನಾಥ್‌ ಜನಪ್ರಿಯ ವ್ಯಕ್ತಿ. ಸದ್ಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ಜೋರಾಗಿದೆ.

Related