ಮತ್ತೆ ಸಿಬಿಐ ಕಚೇರಿಗೆ ಹಾಜರಾದ ಡಿಕೆಶಿ

ಮತ್ತೆ ಸಿಬಿಐ ಕಚೇರಿಗೆ ಹಾಜರಾದ ಡಿಕೆಶಿ

ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡನೇ ಬಾರಿ ಸಿಬಿಐ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ರಮ ಆಸ್ತಿಗಳಿಕೆ ಸಂಬAಧಿಸಿದAತೆ ಡಿಕೆ ಶಿವಕುಮಾರ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಕಳೆದ ವರ್ಷವೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ನಡುವೆ ಮತ್ತೆ ಅ. 5 ರಂದು ಡಿಕೆಶಿಗೆ ಸೇರಿದ 14 ಕಡೆ ಸಿಬಿಐ ಅಧಿಕಾರಿಗಳಿಂದ ದಾಳಿ ನಡೆದಿತ್ತು. ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಈ ವೇಳೆ 74.96 ಕೋಟಿ ಹೆಚ್ಚುವರಿ ಆಸ್ತಿಗಳಿಕೆ ಮಾಡಿರುವುದು ಪತ್ತೆಯಾಗಿತ್ತು. ಅಲ್ಲದೆ, ಅಧಿಕಾರಿಗಳು ಈ ಸಂಬಂಧ  ಕೆಲ ಪ್ರಮುಖ ಆಧಾರಗಳನ್ನು ವಶಪಡಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ನ.25 ರಂದೇ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಡಿ.ಕೆ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ್ದರು. ಅದರಂತೆ ನ. 25 ರಂದು ಡಿ.ಕೆ. ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಇದೀಗ ಎರಡನೇ ಬಾರಿ ಇಂದು ಮತ್ತೆ ಅವರು ಸಿಬಿಐ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಈ ವಿಚಾರಣೆಗೆ ಹೆಚ್ಚುವರಿ ಆಸ್ತಿ ಗಳಿಕೆ ಕುರಿತು ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದರು.

ವಿಚಾರಣೆಯಲ್ಲಿ ಡಿಕೆಶಿ ಎದುರು ಸಿಬಿಐ ಅಧಿಕಾರಿಗಳು ನಿಖರವಾಗಿ ಯಾವ ಪ್ರಶ್ನೆಗಳನ್ನು ಮುಂದಿಟ್ಟರು? ವಿಚಾರಣೆ ಯಾವ ಹಂತದಲ್ಲಿದೆ? ಎಂಬಿತ್ಯಾದಿ ಮಾಹಿತಿಗಳು ಇನ್ನಷ್ಟೆ ಹೊರ ಬೀಳಬೇಕಿದೆ.

Related