ದ್ರೌಪದಿ ಮರ್ಮು ವಿರುದ್ದ ಡಿಕೆಶಿ ದೂರು..

ದ್ರೌಪದಿ ಮರ್ಮು ವಿರುದ್ದ ಡಿಕೆಶಿ ದೂರು..

ಬೆಂಗಳೂರು, ಜು.೧೯ : ರಾಷ್ಟ್ರಪತಿ ಸ್ಥಾನಕ್ಕೆ ಜು.೧೮ರಂದು ನಡೆದ ಚುನಾವಣೆಯಲ್ಲಿ ಬಿಜೆಪಿಯವರು ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್‌ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದು ಚುನಾವಣಾ ಆಮಿಷವಾಗಿದ್ದು, ಎನ್‌ಡಿಎ ಅಭ್ರ‍್ಥಿ ದ್ರೌಪದಿ ಮರ‍್ಮು ಹಾಗೂ ರಾಜ್ಯದ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರರ‍್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿದ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ.

ಚುನಾವಣೆ ನಡೆದ ದಿನದಂದು ಎನ್‌ಡಿಎ ಅಭ್ರ‍್ಥಿ ದ್ರೌಪದಿ ಮರ‍್ಮು ಹಾಗೂ ರಾಜ್ಯದ ಮುಖ್ಯಮಂತ್ರಿಗಳು, ಶಾಸಕರು ಚುನಾವಣಾ ಅಪರಾಧ ಮಾಡಿದ್ದು, ಅವರ ವಿರುದ್ಧ ಸೆಕ್ಷನ್ ೧೭೧ ಬಿ, ೧೭೧ಸಿ, ೧೭೧ ಇ, ೧೭೧ಎಫ್ ಪ್ರಕಾರ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

Related