Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವೇ?: ವಿಜಯೇಂದ್ರ
  • Bangalore
  • Politics
  • State

ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವೇ?: ವಿಜಯೇಂದ್ರ

admin March 5, 2025 1 minute read
Spread the love

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು ಹೊರಟ ಕಾಂಗ್ರೆಸ್ ಸರಕಾರವು, ಇತರರೆಲ್ಲರಿಗೂ ಅನ್ಯಾಯ ಮಾಡಲು ಹೊರಟಿದೆ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರು ನಿಜವಾಗಿಯೂ ಅಹಿಂದ ನಾಯಕರೇ ಆಗಿದ್ದರೆ ಇಷ್ಟೊತ್ತಿಗೆ ಅನೇಕ ಹಿಂದುಳಿದ ಸಮಾಜಗಳಿಗೆ ಆರ್ಥಿಕ ಶಕ್ತಿ ತುಂಬಬೇಕಿತ್ತು. ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ನೀವು ಕೈ ಜೋಡಿಸಬೇಕಿತ್ತು ಎಂದು ತಿಳಿಸಿದರು. ಮಡಿವಾಳರು, ಸವಿತಾ ಸಮಾಜ ಸೇರಿ ಅನೇಕ ಕಾಯಕ ಸಮುದಾಯಗಳು ನಾಡಿನಲ್ಲಿವೆ ಎಂದರು. ಇದನ್ನೂ ಓದಿ: ಪತ್ರಕರ್ತರ ಹೆಸರಿಗೆ ಶೀಘ್ರದಲ್ಲಿ‌ ನಿವೇಶನ ನೋಂದಣಿ: ಲಲಿತಾ ಅನಪೂರ

ಅಲ್ಪಸಂಖ್ಯಾತರಿಗೆ ಶೇ 4ರಷ್ಟು ಮೀಸಲಾತಿಯ ನಿರ್ಧಾರ ತೆಗೆದುಕೊಳ್ಳಲು ಹೊರಟಿದ್ದಾರೆ. ಅಲ್ಪಸಂಖ್ಯಾತರು ಎಂದರೆ ಮುಸ್ಲಿಮರು ಮಾತ್ರವೇ? ಬೇರೆ ಯಾರೂ ಇಲ್ಲವೇ ಎಂದು ಕೇಳಿದರು. ಈ ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ತುಷ್ಟೀಕರಣದ ನೀತಿಯಿಂದ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದ್ದಾರೆ ಎಂದು ಆಕ್ಷೇಪಿಸಿದರು.

ರಾಜ್ಯ ಸರಕಾರವು ಮುಸ್ಲಿಮರ ಓಲೈಕೆ ಮಾಡಲು ಹೊರಟಿದೆ. ಜನರೇ ಇವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ತಿಳಿಸಿದರು. ಅವರು ಭಂಡರಿದ್ದಾರೆ. ದಪ್ಪ ಚರ್ಮ ಬೆಳೆಸಿಕೊಂಡಿದ್ದಾರೆ. ವಿಪಕ್ಷಗಳು ಏನೇ ಹೇಳಿದರೂ ಇವರಿಗೆ ನಾಟುವುದಿಲ್ಲ; ಈ ನಿರ್ಧಾರವನ್ನು ನಾವು ಸದನದಲ್ಲಿ ಪ್ರಶ್ನಿಸುತ್ತೇವೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಪತ್ರಕರ್ತರ ಹೆಸರಿಗೆ ಶೀಘ್ರದಲ್ಲಿ‌ ನಿವೇಶನ ನೋಂದಣಿ: ಲಲಿತಾ ಅನಪೂರ
Next: ದಲಿತ ವಿರೋಧಿ ʼಕೈʼ ಸರಕಾರಕ್ಕೆ ಪಾಠ ಕಲಿಸಲು ಪ್ರತಿಭಟನೆ- ವಿಜಯೇಂದ್ರ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.