ಅಣಬೆ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಅಣಬೆ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಅಣಬೆ ಸೇವಿಸುವುದರಿಂದ ನಮ್ಮ ದೇಹಕ್ಕೆ ಬೇಕಾಗಿರುವ ಹಲವಾರು ವಿಟಮಿನ್ ಸಿ,ಡಿ,ಇ ಸತ್ವ ಸಿಗುತ್ತದೆ. ಹೌದು, ಮಶ್ರೂಮ್ ಕೇವಲ ಬಾಯಿ ರುಚಿಗೆ ಮಾತ್ರವಲ್ಲದೆ ಇದರಲ್ಲಿ ದೇಹಕ್ಕೆ ಅಗತ್ಯವಾದ ಹಲವಾರು ಅಂಶಗಳಿದ್ದು ಈ ಮಶ್ರೂಮ್ ಅನ್ನು ನಾವು ನಮ್ಮ ಆಹಾರದಲ್ಲಿ ಕ್ರಮೇಣವಾಗಿ ಸೇವಿಸುವುದರಿಂದ ಆರೋಗ್ಯದಲ್ಲಿ ವಿವಿಧ ರೀತಿ ಬದಲಾವಣೆಗಳನ್ನು ಕಾಣಬಹುದು ಎಂದು ವೈದ್ಯರು ತಿಳಿಸುತ್ತಾರೆ.

ಇನ್ನು ಅಣಬೆಯಲ್ಲಿ ಸಾಂಬಾರ್, ಗೋಬಿ ಇನ್ನಿತರ ಪದಾರ್ಥಗಳನ್ನು ತಯಾರಿಸಿ ಸೇವಿಸುತ್ತಾರೆ. ಹಸಿ ಅಣಬೆಯನ್ನು ಕೂಡಾ ಸೇವಿಸುತ್ತಾರೆ. ಹಸಿವೆ ಹಸಿ ಅಣಬೆಯನ್ನು ಸೇವಿಸುವುದರಿಂದ ನಮ್ಮ ಆರೋಗ್ಯ ವೃದ್ಧಿಯಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ಅಣಬೆಯಲ್ಲಿ ಅತಿ ಹೆಚ್ಚು ವಿಟಮಿನ್ ಬಿ2 ಮತ್ತು ಬಿ3 ಇರುವುದರಿಂದ ದೇಹಕ್ಕೆ ಇದು ಹೆಚ್ಚು ಅಗತ್ಯ. ಮಶ್ರೂಮ್ ನಲ್ಲಿ ಕೊಲೆಸ್ಟ್ರಾಲ್, ಬೊಜ್ಜಿನ ಅಂಶವಿಲ್ಲ ಮತ್ತು ಕಡಿಮೆ ಕಾರ್ಬೊ ಹೈಡ್ರೇಡ್ ಹೊಂದಿದೆ. ಅಷ್ಟೇ ಅಲ್ಲ ಇದರಲ್ಲಿ ನಾರಿನಂಶ ಹೆಚ್ಚಿರುವುದರಿಂದ ಬೊಜ್ಜು ಕರಗಿಸುವುದು ಸುಲಭ.

ಇದರಲ್ಲಿನ ಕೆಲವು ಎಂಜೈಮು ಅಣಬೆ ಜೀರ್ಣವಾದ ನಂತರ ಕೊಲೆಸ್ಟ್ರಾಲ್ ಕರಗಿಸಲು ಸಹಾಯ ಮಾಡುತ್ತದೆ. ಧುಮೇಹಿಗಳೂ ಕೂಡ ಅಣಬೆ ತಿನ್ನಬಹುದು. ಏಕೆಂದರೆ ಇದರಲ್ಲಿ ಕೊಲೆಸ್ಟ್ರಾಲ್ ಇಲ್ಲದಿರುವುದರಿಂದ ಸೇವನೆಯಿಂದ ತೊಂದರೆಯಿಲ್ಲ.

ಇದರಲ್ಲಿನ ನೈಸರ್ಗಿಕ ಇನ್ಸುಲಿನ್ ಮತ್ತು ಎಂಜೈಮುಗಳು ಸೇವಿಸಿದ ಆಹಾರದಲ್ಲಿನ ಸಕ್ಕರೆ ಮತ್ತು ಸ್ಟಾರ್ಚ್ ಅಂಶವನ್ನು ತೆಗೆದುಹಾಕುತ್ತದೆ. ಎರ್ಗೊಥಿಯಾನೈನ್ ಎಂಬ ಅತಿ ಶಕ್ತಿಯುತ ಆಂಟಿ ಯಾಕ್ಸಿಡಂಟ್ ಇದರಲ್ಲಿರುವದರಿಂದ ರೋಗಗಳಿಂದ ದೂರವಿರಿಸಲು ದೇಹಕ್ಕೆ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.

ಇದರಲ್ಲಿನ ಆಂಟಿ ಬಯಾಟಿಕ್ ಅಂಶ ದೇಹ ಇನ್ನಿತರ ಸೋಂಕುಗಳಿಗೆ ತುತ್ತಾಗುವುದನ್ನು ತಡೆಯುತ್ತದೆ. ವಿಟಮಿನ್ ಡಿ ಹೊಂದಿರುವ ಏಕೈಕ ತರಕಾರಿಯೆಂದರೆ ಅಣಬೆ. ಅಷ್ಟೇ ಅಲ್ಲ, ಅಣಬೆಯಲ್ಲಿ ಎಲುಬಿಗೆ ಶಕ್ತಿ ನೀಡುವ ಕ್ಯಾಲ್ಸಿಯಂ, ರಕ್ತಹೀನತೆ ನಿವಾರಿಸುವ ಕಬ್ಬಿಣಾಂಶ ಮತ್ತು ರಕ್ತದೊತ್ತಡ ಕಡಿಮೆ ಮಾಡಲು ಸಹಕರಿಸುವ ಪೊಟಾಶಿಯಂ ಪೂರಕವಾಗಿದೆ.

Related