ದೊಡ್ಡಪತ್ರೆ ಎಲೆಯಲ್ಲಿರುವ ಔಷಧಿ ಗುಣಗಳು ನಿಮಗೆ ಗೊತ್ತೇ?

ದೊಡ್ಡಪತ್ರೆ ಎಲೆಯಲ್ಲಿರುವ ಔಷಧಿ ಗುಣಗಳು ನಿಮಗೆ ಗೊತ್ತೇ?

ಸಾಮಾನ್ಯವಾಗಿ ನಮ್ಮೆಲ್ಲರ ಮನೆ ಸುತ್ತಮುತ್ತ ಸಿಗುವ ಗಿಡ ಮರಗಳೆಂದರೆ ಅದು ಮಲ್ಲಿಗೆ ಹೂವು ಇನ್ನಿತರ ಗಿಡಗಳನ್ನು ನಾವು ಮನೆ ಸುತ್ತಮುತ್ತ ಬೆಳೆಸಿರುತ್ತೇವೆ..

ಹೌದು, ನಮ್ಮ ಮನೆ ಹಿತ್ತಲಿನಲ್ಲಿ ಅಥವಾ ಬಾಲ್ಕನಿಯಲ್ಲಿ ಬೆಳೆಸುವಂತಹ ದೊಡ್ಡಪತ್ರೆ ಎಲೆಗಳನ್ನು ಬಳಸಿಕೊಂಡು ನಾವು ನಮ್ಮ ಆರೋಗ್ಯದಲ್ಲಿರುವಂತಹ ಹಲವಾರು ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಚಳಿಗಾಲ ಬಂತೆಂದರೆ ಸಾಕು ಎಲ್ಲರಿಗೂ ನೆಗಡಿ ಕೆಮ್ಮು ಜ್ವರ ಕಡುವುದು ಸರ್ವೇಸಾಮಾನ್ಯ.

ದೊಡ್ಡಪತ್ರೆ ಎಲೆಯಲ್ಲಿ ಹಲವಾರು ಔಷಧಿಗಳ ಗುಣವಿದ್ದು ನೆಗಡಿ ಕೆಮ್ಮು ಜ್ವರಗಳಂತಹ ಕಾಯಿಲೆಗಳಿಗೆ ಈ ದೊಡ್ಡಪತ್ರೆ ಎಲೆ ಸಹಕಾರಿಯಾಗಿದೆ ಎಂದು ವೈದ್ಯರು ತಿಳಿಸುತ್ತಾರೆ.

ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.

ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ.

ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ.

Related