ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? : ಸಿಎಂ

ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? : ಸಿಎಂ

ಚಿಕ್ಕಮಗಳೂರು: ಖಾಲಿ ಚೊಂಬಿಗೆ ಮತ ಹಾಕಿ ನಿಮ್ಮ ಮತದ ಘನತೆ ಕಳೆದುಕೊಳ್ಳುತ್ತೀರೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತದಾರರಲ್ಲಿ ಪ್ರಶ್ನಿಸಿದ್ದಾರೆ. ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬೃಹತ್ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿಯವರು ಭಾರತೀಯರಿಗೆ ಸರಣಿ ಸುಳ್ಳುಗಳನ್ನು ನಂಬಿಸಿ ವಂಚಿಸಿದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಎಂದು ನಂಬಿಸಿದರು. ಈಗ ನಂಬಿಕೆ ದ್ರೋಹ ಆಗಿದೆ.

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಎಂದು ದೇಶದ ಯುವಕ/ಯುವತಿಯರನ್ನು ನಂಬಿಸಿದರು. ವಿದ್ಯಾವಂತರು ಡಬ್ಬಲ್ ಡಿಗ್ರಿ ಪಡೆದು ಉದ್ಯೋಗ ಕೊಡಿ ಎಂದರೆ ಹೋಗಿ ಪಕೋಡ ಮಾರಾಟ ಮಾಡಿ ಎನ್ನುತ್ತಿದ್ದಾರೆ. ಇಂಥಾ ನಂಬಿಕೆ ದ್ರೋಹಗಳು ಪ್ರಧಾನಿ ಕುರ್ಚಿಗೆ ಘನತೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ನಂಬಿಸಿ ರೈತರ ಖರ್ಚು ಮೂರು ಪಟ್ಟು ಮಾಡಿದರು. ಇದು ದೇಶದ ಇಡಿ ದೇಶದ ರೈತ ಕುಲಕ್ಕೆ ಬಗೆದ ನಂಬಿಕೆ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ ಬೆಲೆ ಏರಿಕೆ ಸಂಪೂರ್ಣ ತಡೆಯುವುದಾಗಿ ನಂಬಿಸಿದರು. ಈಗ ಎಲ್ಲದರ ಬೆಲೆ ಆಕಾಶ ಮುಟ್ಟಿದೆ. ಇಂಥಾ ನಂಬಿಕೆ ದ್ರೋಹಗಳನ್ನು ಭಾರತೀಯರಿಗೆ ಬಗೆದಿದ್ದಾರಲ್ಲಾ ಇಂಥಾ ವ್ಯಕ್ತಿಯ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತಕ್ಕೆ ಘನತೆ ಬರುತ್ತದಾ ಎಂದು ಪ್ರಶ್ನಿಸಿದರು.

Related