ಉಹಾಪೋಹಗಳಿಗೆ ಕಿವಿ ಕೊಡಬೇಡಿ: ಮಲ್ಲಿಕಾರ್ಜುನ ಖರ್ಗೆ

ಉಹಾಪೋಹಗಳಿಗೆ ಕಿವಿ ಕೊಡಬೇಡಿ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆ ಸಮಿತಿ ಸುತ್ತಿದೆ. ಹಾಗಾಗಿ ನಾವು ಎಲ್ಲರೂ ಒಗಟಿನಿಂದ ಕೆಲಸ ಮಾಡಬೇಕು. ಊಹಪೋಹಗಳಿಗೆ ನಾವು ಕಿವಿ ಕೊಡಬಾರದು. ಗ್ಯಾರಂಟಿಗಳ ಯೋಜನೆಯನ್ನು ನಾವು ಹೇಗೆ ಪೂರೈಸಬೇಕೆಂದು ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಬೇಕು ಅದು ಬಿಟ್ಟು ಊಹಾಪೋಹಗಳಿಗೆ ಯಾರು ಕಿವಿ ಕೊಡಬಾರದೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ನಗರದಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಡಿಸಿಎಂ ವಿಚಾರ ಹೈಕಮಾಂಡ್​ ಮುಂದೆ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನೇ ಕೇಳಿ ಎಂದಿದ್ದಾರೆ. ಹೆಚ್ಚುವರಿ ಡಿಸಿಎಂ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಗಮನ ಕೊಡಬೇಕು. ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೆ ಇಂತಹದ್ದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.

 

Related