ಇನ್ಮುಂದೆ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ!?

ಇನ್ಮುಂದೆ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರ!?

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ವನ್ನು ರಾಜ್ಯದಲ್ಲಿ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ.

ಪ್ರತಿ ವರ್ಷವೂ ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಇನ್ನಿತರ ಸ್ಥಳಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಜನವರಿ 26 ಆಚರಣೆ ಮಾಡುತ್ತಾರೆ. ಈ ಬಾರಿ ಜನವರಿ 26ರ ಗಣರಾಜ್ಯೋತ್ಸವಕ್ಕೆ ಡಾ. ಬಿಆರ್ ಅಂಬೇಡ್ಕರ್ ಅವರ ಫೋಟೋವನ್ನು ಅಳವಡಿಸಬೇಕೆಂದು ಕಡ್ಡಾಯವಾಗಿ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹೌದು, ಜನವರಿ 26ನೇ ದಿನಾಂಕದಂದು ರಾಜ್ಯದ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಸರ್ಕಾರಿ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಲಾಗಿದೆ.

 

Related