ಬೆಂಗಳೂರು: ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಕೇಂದ್ರ ಸಂಘ ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನೌಕರರ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಕೇಂದ್ರ ಸಂಘದ ರಾಜ್ಯಾಧ್ಯಕ್ಷರಾದ ಡಾ. ಜಿ.ಪಿ. ದೇವರಾಜ್ ರವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪನವರು ಸನ್ಮಾನಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಾದ ಡಾ. ರಾಕೇಶ್ ಕುಮಾರ್.ಕೆ. ಐಎಎಸ್, ಕರ್ನಾಟಕ ರಾಜ್ಯ ಸಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
