ಬೇಸಿಗೆಯಲ್ಲಿರಲಿ ಎಳನೀರು ಸೇವನೆ

ಬೇಸಿಗೆಯಲ್ಲಿರಲಿ ಎಳನೀರು ಸೇವನೆ

ಪ್ರತಿ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ವಿಪರೀತ ಬಿಸಿಲಿರುವುದರಿಂದ ಜನ ಹೈರಾಣ ಆಗುತ್ತಿದ್ದಾರೆ. ಇದರ ಜೊತೆಗೆ ಆರೋಗ್ಯದ ಸಮಸ್ಯೆಯನ್ನು ಕೂಡ ಎದುರಿಸುತ್ತಿದ್ದಾರೆ.

ಇನ್ನು ಬಿಸಿಲು ಕಾಲದಲ್ಲಿ ಸಾಮಾನ್ಯವಾಗಿ ನಮ್ಮ ಆರೋಗ್ಯದ ಮೇಲೆ ನಾನಾ ರೀತಿಯ ಅಡ್ಡ ಪರಿಣಾಮಗಳಾಗುವುದುಂಟು. ಬೇಸಿಗೆಯಲ್ಲಿ ನಮ್ಮ ದೇಹದ ಮೇಲೆ ಬೀರುವ ಅಡ್ಡ ಪರಿಣಾಮಗಳಿಗೆ ಎಳನೀರು ಒಂದು ಮನೆ ಮದ್ದಾಗಿದೆ.

ಎಳನೀರು ಸೇವನೆಯಿಂದ ನಮ್ಮ ದೇಹಕ್ಕೆ ಬೇಕಾದ ಎಲ್ಲಾ ರೀತಿಯ ಪೌಷ್ಟಿಕಾಂಶಗಳನ್ನು ನೀಡುವುದರ ಜೊತೆಗೆ ನಮ್ಮ ಚರ್ಮದ ಕಾಂತಿಯನ್ನು ಕೂಡ ಎಳನೀರು ರಕ್ಷಿಸುತ್ತದೆ.

ಪ್ರತಿನಿತ್ಯ ಎಳನೀರು ಸೇವನೆ ಮಾಡುವದರಿಂದ ನಮ್ಮ ಕಣ್ಣು ಉರಿ, ಬಿಸಿಲಿಗೆ ಉಂಟಾಗುವ ಉಷ್ಣ ಸಮಸ್ಯೆ, ಚರ್ಮದ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಎಳನೀರು ರಾಮಬಾಣವಾಗಿದೆ.

ಬೆಳಗ್ಗಿನ ಪ್ರಥಮ ಆಹಾರವಾಗಿ ಒಂದು ಭರ್ತಿ ಎಳನೀರನ್ನು ಕುಡಿದರೆ ದಿನದ ಅಗತ್ಯದ ಎಲೆಕ್ಟ್ರೋಲೈಟುಗಳು ಲಭಿಸುತ್ತವೆ ಹಾಗೂ ಇವು ಅಧಿಕ ರಕ್ತದೊತ್ತಡ ಎದುರಾಗದಂತೆ ತಡೆಯುತ್ತವೆ.

ಅವಶ್ಯಕ ಎಲೆಕ್ಟ್ರೋಲೈಟುಗಳ ಹೊರತಾಗಿ ಕಾಲ್ಸಿಯಂ, ಮೆಗ್ನೇಶಿಯಂ, ಗಂಧಕ, ಪೊಟ್ಯಾಶಿಯಂ ಮತ್ತು ಸೋಡಿಯಂ ಅಂಶಗಳು ಪ್ರಮುಖವಾಗಿದ್ದು ಆರೋಗ್ಯವನ್ನು ಕಾಪಾಡುವಲ್ಲಿ ನೆರವಾಗುತ್ತವೆ.

ತ್ವಚೆಯ ಕಾಂತಿ ಹೆಚ್ಚಿಸುತ್ತದೆ

ತ್ವಚೆಯ ಆರೋಗ್ಯ ಉತ್ತಮವಾಗಿರಲು ದೇಹದಲ್ಲಿ ಸಾಕಷ್ಟು ಪ್ರಮಾಣದ ಆರ್ದ್ರತೆ ಇರಬೇಕು. ಎಳನೀರನ್ನು ಕುಡಿಯುವ ಹೊರತಾಗಿ ಎಳನೀರನ್ನು ತ್ಬೆಚೆಗೆ ಹಚ್ಚಿಕೊಳ್ಳುವ ಮೂಲಕವೂ ಅಗತ್ಯವಿರುವ ಪೋಷಣೆಯನ್ನು ಒದಗಿಸಬಹುದು. ಪರಿಣಾಮವಾಗಿ ಕ್ಷಿಪ್ರ ಸಮಯದಲ್ಲಿಯೇ ತ್ವಚೆ ಹೊಳೆಯಲಾರಂಭಿಸುತ್ತದೆ.

ಎಳನೀರು ನೈಸರ್ಗಿಕ ಹಾಗೂ ಅತ್ಯುತ್ತಮವಾದ ತೇವಕಾರಕವಾಗಿದೆ ಹಾಗೂ ಈ ಗುಣ ಮೊಡವೆಗಳನ್ನು ದೂರವಿಡುತ್ತದೆ. ಎಳನೀರಿನಲ್ಲಿರುವ ಸೈಟೋಕಿನಿನ್ ಎಂಬ ಪೋಷಕಾಂಶಕ್ಕೆ ಚರ್ಮದ ಸೆಳೆತವನ್ನು ಹೆಚ್ಚಿಸುವ ಗುಣವಿದ್ದು ವೃದ್ದಾಪ್ಯದ ಚಿಹ್ನೆಗಳು ಆವರಿಸುವುದನ್ನು ತಡವಾಗಿಸಿ ವೃದ್ದಾಪ್ಯವನ್ನು ಮುಂದೂಡುತ್ತದೆ.

ಬಾಯಾರಿಕೆಗೆ ಎಳನೀರಿಗಿಂತ ಉತ್ತಮವಾದ ಜಲ ಈ ಜಗತ್ತಿನಲ್ಲಿಲ್ಲ. ವಿಶೇಷವಾಗಿ ಇದರಲ್ಲಿರುವ ಎಲೆಕ್ಟ್ರೋಲೈಟುಗಳು ದಣಿದ ದೇಹಕ್ಕೆ ಶಕ್ತಿಯನ್ನು ಒದಗಿಸುವ ಜೊತೆಗೇ ಬೆವರು, ಅತಿಸಾರ, ವಾಂತಿ ಮೊದಲಾದ ಕಾರಣಗಳಿಂದ ದೇಹದಿಂದ ನಷ್ಟವಾಗಿದ್ದ ನೀರಿನಂಶವನ್ನು ಮರುದುಂಬಿಸಿ ಕೋಡುತ್ತದೆ.

 

Related