ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್ ಗೆ ಚಾಲನೆ

ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್ ಗೆ ಚಾಲನೆ

ಬೆಂಗಳೂರು: ಬೆಂಗಳೂರಿನ ಸಾರ್ವಜನಿಕರಿಗೆ ಆರಾಮದಾಯಕ ಪರಿಸರ- ಸ್ನೇಹಿ ಪ್ರಯಾಣವನ್ನು ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿದ್ದು, ಪ್ರಯಾಣಿಕರು ಶೀಘ್ರದಲ್ಲೇ ಆರಾಮದಾಯಕ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಆನಂದಿಸಲು ಸಾಧ್ಯವಾಗುತ್ತದೆ.

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಬಸ್‌ ನ ಪ್ರಥಮ ಪ್ರೊಟೊಟೈಪ್ ಮಾದರಿಯನ್ನು ಇಂದು ರಾಮಲಿಂಗಾ ರೆಡ್ಡಿ, ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು, ಕರ್ನಾಟಕ ಸರ್ಕಾರರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರು , ಬೆಂಗಳೂರಿನ ಜನತೆಯು, ಬಿ.ಎಂ.ಟಿ.ಸಿ ಯ ನೂತನ ವಿದ್ಯುತ್ ವಾಹನಗಳಲ್ಲಿ ಪ್ರಯಾಣಿಸಿ ಮಾಲಿನ್ಯ ರಹಿತ ನಗರದ ಅನುಭವವನ್ನು ಪಡೆಯಲಿದ್ದಾರೆ. ಕರ್ನಾಟಕ ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ 4000 ಹೊಸ ವಾಹನಗಳನ್ನು ಒದಗಿಸುವ ಮತ್ತು 13000 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ಕೊಡುವ ಜೊತೆಗೆ ಬಜೆಟ್ ‌ನಲ್ಲಿ ರೂ.500 ಕೋಟಿಗಳನ್ನು ನಿಗಮಗಳಿಗೆ ಬಸ್ ಖರೀದಿಗಾಗಿ ವಿಸ್ತರಿಸುವುದಾಗಿ ತಿಳಿಸಿದರು.

ಮುಂದುವರೆದು, ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರುಗಳಿಗೆ ನೂತನ ವಾಹನಗಳನ್ನು ಒದಗಿಸಲಾಗಿದ್ದು, ಇದರಿಂದ ಅವರು ಬಸ್ ನಿಲ್ದಾಣಗಳು, ಮೋಟಾರು ವಾಹನ ಇಲಾಖೆ, ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಬೇಡಿ ನೀಡಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬಹುದೆಂದು ತಿಳಿಸಿ, ಈ ನೂತನ 921 ಎಲೆಕ್ಟ್ರಕ್ ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ ಈ ಆರ್ಥಿಕ ವರ್ಷದೊಳಗಾಗಿ ಹಂತ-ಹಂತವಾಗಿ ಸೇರ್ಪಡೆ ಮಾಡುವುದಾಗಿ ತಿಳಿಸಿದರು.

ಈ‌ ಸಂದರ್ಭದಲ್ಲಿ ಡಾ. ಎನ್.ವಿ. ಪ್ರಸಾದ್, ಭಾಆಸೇ, ಸರ್ಕಾರದ ಕಾರ್ಯದರ್ಶಿ, ಸಾರಿಗೆ ಇಲಾಖೆ ಮತ್ತು ಶ್ರೀಮತಿ ಜಿ ಸತ್ಯವತಿ, ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಶ್ರೀ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಶ್ರೀ ರೋಹಿತ್ ಶ್ರೀವಾಸ್ತವ, ಉಪಾಧ್ಯಕ್ಷರು, ಶ್ರೀ ಸುಶಾಂತ್ ನಾಯಕ್, ಗ್ಲೋಬಲ್ ಮುಖ್ಯಸ್ಥರು, ಸರ್ಕಾರ ಹಾಗೂ ಸಾರ್ವಜನಿಕ ವ್ಯವಹಾರ, ಶ್ರೀ ಅಸೀಮ್ ಮುಖ್ಯೋಪಾಧ್ಯಾಯ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಟಿ.ಎಂ.ಎಲ್, ಶ್ರೀ ಕೆ.ಜಿ.ಪ್ರಸಾದ್, ಹಿರಿಯ ಪ್ರಧಾನ ವ್ಯವಸ್ಥಾಪಕರು ದಕ್ಷಿಣ ಟಿ.ಎಂ.ಎಲ್, ಶ್ರೀ ಕಿಶೋರ್ ರಾವ್, ಪ್ರಧಾನ ವ್ಯವಸ್ಥಾಪಕರು ನಿರ್ದೇಶಕರು, ಅರವಿಂದ್ ಮೋಟಾರ್ಸ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಟಾಟಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

 

Related