ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಕಾರವಾರ : ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆ ಯಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿ, ಅಲಗೇರಿ ಹಾಗೂ ಡೊಂಗ್ರಿ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ, ಸೋಲಾರ ದೀಪ, ಸುಸಜ್ಜಿತ ರಸ್ತೆ ನಿರ್ಮಾಣ, ಒಳ ಚರಂಡಿ ನಿರ್ಮಾಣ ಸೇರಿದಂತೆ ಈ ಮೂರು ಪಂಚಾಯಿತಿಗಳಲ್ಲಿ ತಲಾ ಒಂದು ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ.

ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಮಾದರಿಗ್ರಾಮ ನಿರ್ಮಿಸಲಾಗುವುದು. ದೇಶದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ಜಗದೀಶ್ ನಾಯಕ, ತಾಪಂ ಸದಸ್ಯರಾದ ಸಂಜೀವ ಕುಚನಾಡ, ವೀಣಾ ಸಿದ್ದಿ, ಬೇಲೇಕೇರಿ ಗ್ರಾ.ಪಂ. ಅಧ್ಯಕ್ಷರಾದ ಸವಿತಾ ಕೃಷ್ಣ ಬಾನಾವಳಿಕರ್ ಇನ್ನಿತರರು ಇದ್ದರು.

Related