ಚಳ್ಳಕೆರೆ: ಬೆಳ್ಳಂ ಬೆಳಗೆ ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕನ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಮಾರು 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗುತ್ತಿದ್ದು, ಖಾಸಗಿ ವಾಹನದಲ್ಲಿ ಬಂದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರ, 4 ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಶುಕ್ರವಾರ ಆಗಸ್ಟ್ 22) ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ, ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಗೋವಾ ಸೇರಿ ಒಟ್ಟು 17 ಕಡೆ ದಾಳಿ ನಡೆದಿದೆ. ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: ಖಂಡ್ರೆ ವಿರುದ್ಧ ಸಿಎಂ, ಡಿಸಿಎಂ ಗೆ ದೂರು!
ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ.
20ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
