ಕಾರವಾರ: ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಕಾರವಾರ ತಾಲೂಕಿನ ಚಿತ್ತಾಕುಲದಲ್ಲಿರುವ ಸತೀಶ್ ಸೈಲ್ ಮನೆಯ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಾಸಕ ಸತೀಶ್ ಸೈಲ್ ಅವರು ಆದಾಯಕ್ಕಿಂತ ಅಧಿಕವಾಗಿ ಆಸ್ತಿ ಮಾಡಿರುವ ಆರೋಪದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಶಸಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ ದಾಳಿ ಮಾಡಿದೆ. ಈ ವೇಳೆ ಶಾಸಕರಾಗಲಿ ಅಥವಾ ಅವರ ಕುಟುಂಬದವರಾಗಲಿ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿ ಇರುವ ಕೆಲಸದವನನ್ನು ವಿಚಾರಣೆ ನಡೆಸುತಿದ್ದು, ಶಾಸಕರಿಗೂ ಬುಲಾವ್ ಹೋಗಿದೆ. ಇದನ್ನೂ ಓದಿ: ಗುಡಿಬಂಡೆ ತಾಲೂಕು ಆಸ್ಪತ್ರೆಯಲ್ಲಿ ಸದ್ದಿಲ್ಲದೆ ಜನೌಷಧಿ ಕೇಂದ್ರಕ್ಕೆ ಶಾಶ್ವತ ಬೀಗ
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅದಿರು ಸಾಗಾಟ ನಡೆಸುತ್ತಿದ್ದ ಸತೀಶ್ ಸೈಲ್ ಈ ಹಿಂದೆ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಈ ಕುರಿತು ಈ ಹಿಂದೆ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ತಂಡದಿಂದ ದೂರು ದಾಖಲಿಸಲಾಗಿತ್ತು. ಜನಪ್ರತಿನಿಧಿಗಳ ನ್ಯಾಯಾಲದಿಂದ ಜೈಲು ಶಿಕ್ಷೆ ವಿಧಿಸಲಾಗಿತ್ತು. ಹೈಕೋರ್ಟ್ ಮೂಲಕ ಜಾಮೀನು ಪಡೆದು ಸತೀಶ್ ಸೈಲ್ ಹೊರಬಂದಿದ್ದರು.
