ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಹೊಸದುರ್ಗ ಗ್ರಾಮದಲ್ಲಿ ಪ್ರೆಸ್ಟೀಜ್ ಗ್ರೂಪ್ ನವರು ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆಯಡಿಯಲ್ಲಿ ನಿರ್ಮಿಸಲಿರುವ ಸರಕಾರಿ ಶಾಲೆ ಕಟ್ಟಡ ಕಾಮಗಾರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಂದು (ಶನಿವಾರ ಫೆ. 15) ರಂದು ಗುದ್ದಲಿ ಪೂಜೆ ನೆರವೇರಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಯಾವ ತರ ವಿದ್ಯಾಭ್ಯಾಸದ ವ್ಯವಸ್ಥೆ ಇದೆಯೋ ಅದೇ ರೀತಿ ಎಲ್ಲಾ ಜಿಲ್ಲೆಯಲ್ಲೂ ವಿದ್ಯಾಭ್ಯಾಸದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುವುದು ಅದಕ್ಕೆ ನಾವು ಪ್ರಯತ್ನ ಪಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಸಂಸದ ಡಿ ಕೆ ಸುರೇಶ್, ಪ್ರೆಸ್ಟೀಜ್ ಗ್ರೂಪ್ ನ ನದೀಮ್, ಸ್ಥಳೀಯ ಮುಖಂಡ ದುಂತೂರು ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.
