ಅನಕ್ಷರಸ್ಥರಿಗೆ ಶಿಕ್ಷಣ

ಅನಕ್ಷರಸ್ಥರಿಗೆ ಶಿಕ್ಷಣ

ದೇವನಹಳ್ಳಿ:ವಯಸ್ಕ ಶಿಕ್ಷಣದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಸಾಕ್ಷರರನ್ನಾಗಿಸಬೇಕು, ಜಿಲ್ಲೆಯಲ್ಲಿ ಶೇ. 100 ರಷ್ಟು ಸಾಕ್ಷರತೆಯನ್ನು ಸಾಧಿಸಬೇಕು ಎಂದು ಬುಧವಾರ ಬೆಂಗಳೂರು  ಜಿಲ್ಲಾಡಳಿತ ಭವನದದಲ್ಲಿ  ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಲೋಕ ಶಿಕ್ಷಣ ಸಮಿತಿ, ಎನ್.ಎಸ್.ಎಸ್ ಸಹಯೋಗದಲ್ಲಿ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 55ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಎಲ್ಲರಿಗೂ ಶಿಕ್ಷಣ ದೊರೆಯಬೇಕು, ನಿಟ್ಟಿನಲ್ಲಿ ಶಿಕ್ಷಣ ಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 1,96,006 ಮಂದಿ ಅನಕ್ಷರಸ್ಥರಿದ್ದು, ಪ್ರಸ್ತುತ 1,15,910 ಮಂದಿ ಸಾಕ್ಷರರಾಗಿದ್ದಾರೆ. ಬಾಕಿ ಉಳಿದಿರುವ 80,093 ಅನಕ್ಷರಸ್ಥರಿಗೂ ಸಂಜೆ ವೇಳೆಯಲ್ಲಿ ದಿನಕ್ಕೆ ಎರಡು ಗಂಟೆಗಳ ಅವಧಿಯಲ್ಲಿ ಶಿಕ್ಷಣ ನೀಡುವ ಮೂಲಕ ಶೀಘ್ರವೇ ಅವರನ್ನು ನವ ಸಾಕ್ಷರರನ್ನಾಗಿಸುವುದು ಗುರಿಯಾಗಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಶ್ರೇಣಿ ಸಹಿತ ಪ್ರಮಾಣ ಪತ್ರ ವಿತರಿಸಲಾಗುವುದು ನಂತರ ಸಾಕ್ಷರತಾ ಪ್ರಮಾಣ ವಚನ ಸ್ವೀಕರಿಸಲಾಯಿತು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಾ. ಈ. ರವಿಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷ್ಮೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ವಿಶ್ವನಾಥಪುರ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related