ಕಾಂಗ್ರೆಸ್ ಶಾಸಕನಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ..!

ಕಾಂಗ್ರೆಸ್ ಶಾಸಕನಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ..!

ಬೆಳಗಾವಿ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನಕ್ಕೆ ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಅಭ್ಯರ್ಥಿಗಳ ಪರವಾಗಿ ಘಟಾನುಘಟಿಗಳೇ ಅಬ್ಬರಿಸುತ್ತಿದ್ದಾರೆ.

ಪ್ರಚಾರದಲ್ಲಿ ಮಾತಿನರಸದಲ್ಲಿ ಒಬ್ಬರ ಮೇಲೆ ಒಬ್ಬರು ಆರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ ಮತ್ತು ಅವಹೇಳನಕಾರಿ ಪದಗಳನ್ನು ಬಳಸುತ್ತಿದ್ದಾರೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್

ಹೌದು, ಚುನಾವಣಾ ಪ್ರಚಾರದಲ್ಲಿ ಅವೇಳನಕಾರಿ ಪದ ಬಳಸಿದ್ದಕ್ಕೆ ಕಾಂಗ್ರೆಸ್ನ ಶಾಸಕ ರಾಜು ಕಾಗೆ ಅವರ ವಿರುದ್ಧ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಹಾಯಕ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದು, 24 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಬೇರೊಬ್ಬ ವ್ಯಕ್ತಿಯ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಆರೋಪ ರಾಜು ಕಾಗೆ ಅವರ ಮೇಲಿತ್ತು.

ಪ್ರಧಾನಿ ಮೋದಿ ಸತ್ತರೆ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದರು. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related