ಟ್ವಿಟ್ಟರ್ ಮೂಲಕ ಅಪ್ಪುರವರಿಗೆ ಅವಮಾನ..!

  • In Cinema
  • July 14, 2022
  • 243 Views
ಟ್ವಿಟ್ಟರ್ ಮೂಲಕ ಅಪ್ಪುರವರಿಗೆ ಅವಮಾನ..!

ದೊಡ್ಮನೆ ರಾಜಕುಮಾರ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪುಗಳ ಜೊತೆ ಫ್ಯಾನ್ಸ್ ಹೇಗೋ ಜೀವನ ಮಾಡ್ತಿದ್ದಾರೆ. ಅವರು ನಮ್ಮೊಡನಿಲ್ಲ ಅಂತ ಅಭಿಮಾನಿಗಳು ಅಂದುಕೊಂಡೇ ಇಲ್ಲ. ಆದ್ರೆ ಈ ಅಭಿಮಾನಿಗಳ ಅಭಿಮಾನಕ್ಕೆ, ಅಪ್ಪು ಮೇಲಿನ ಪ್ರೀತಿಗೆ ಸಾಮಾಜಿಕ ಜಾಲತಾಣದ ದಿಗ್ಗಜ, ಮೈಕ್ರೋ ಬ್ಲಾಗಿಂಗ್ ಸೈಟ್ ಆದ ಟ್ವಿಟರ್ ಅಪಮಾನ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಟ ,ಪವರ್‌ ಸ್ಟಾರ್‌ ಪುನೀತ್ ರಾಜ್‌ಕುಮಾರ್ ದೈಹಿಕವಾಗಿ ನಮ್ಮನ್ನು ಅಗಲಿ ಸುಮಾರು 9 ತಿಂಗಳು ಆಗುತ್ತಾ ಬಂತು. ಆದ್ರೆ ಕನ್ನಡಿಗರು, ಅದರಲ್ಲೂ ಅವರ ಅಭಿಮಾನಿಗಳು ಒಂದೇ ಒಂದು ಕ್ಷಣ ಅವರನ್ನು ಮರೆತಿಲ್ಲ, ಮರೆಯುವುದೂ ಇಲ್ಲ. ಕನ್ನಡಿಗರ ಎದೆಯಲ್ಲಿ ಅಪ್ಪು ಎಂದಿಗೂ ಜೀವಂತ. ದೊಡ್ಮನೆ ರಾಜಕುಮಾರ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪುಗಳ ಜೊತೆ ಫ್ಯಾನ್ಸ್ ಹೇಗೋ ಜೀವನ ಮಾಡ್ತಿದ್ದಾರೆ. ಅವರು ನಮ್ಮೊಡನಿಲ್ಲ ಅಂತ ಅಭಿಮಾನಿಗಳು ಅಂದುಕೊಂಡೇ ಇಲ್ಲ. ಆದ್ರೆ ಈ ಅಭಿಮಾನಿಗಳ ಅಭಿಮಾನಕ್ಕೆ, ಅಪ್ಪು ಮೇಲಿನ ಪ್ರೀತಿಗೆ ಸಾಮಾಜಿಕ ಜಾಲತಾಣದ ದಿಗ್ಗಜ, ಮೈಕ್ರೋ ಬ್ಲಾಗಿಂಗ್ ಸೈಟ್  ಆದ ಟ್ವಿಟರ್ ಅಪಮಾನ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಅಪ್ಪು ಅಭಿಮಾನಿಗಳು ಟ್ವಿಟರ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಹೌದು, ಇಂಥದ್ದೊಂದು ಆರೋಪ ಇದೀಗ ಕೇಳಿ ಬಂದಿದೆ. ಪುನೀತ್ ರಾಜ್‌ಕುಮಾರ್ ಅವರ ಟ್ವಿಟರ್ ಖಾತೆಯಿಂದ ಬ್ಯೂ ಟಿಕ್ ಅಥವಾ ನೀಲಿ ಗುರುತನ್ನು ಟ್ಟಿಟರ್ ತೆಗೆದಿದೆ ಎನ್ನಲಾಗುತ್ತಿದೆ. ಇದಕ್ಕೆ ಟ್ವಿಟರ್ ವಿರುದ್ಧ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಗರಂ ಆಗಿದ್ದಾರೆ.

 

 

Related