ಈಶ್ವರಪ್ಪಗೆ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ

ಈಶ್ವರಪ್ಪಗೆ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ

ಬೆಂಗಳೂರು: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಬಿಜೆಪಿ ಪಕ್ಷದ ಸೂಚನೆಗಳನ್ನು ಕಡೆಗೆಣಿಸಿರುವುದರಿಂದ ಬಿಜೆಪಿ ಪಕ್ಷದಿಂದ ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

ಈ ಬಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ ಈಶ್ವರಪ್ಪ ಅವರ ಪುತ್ರಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಣದಲ್ಲಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ಪಕ್ಷವು ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ.

2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ನಿನ್ನೆ ಕಡೆಯ ದಿನವಾಗಿತ್ತು. ಆದರೆ, ಬಂಡಾಯ ಅಭ್ಯರ್ಥಿಯಾಗಿಯೇ ಕಣದಲ್ಲಿ ಉಳಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಿ ಬಿಜೆಪಿ ಆದೇಶ ಹೊರಡಿಸಿದೆ.

”ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಕಾರಣ ಕೆ. ಎಸ್. ಈಶ್ವರಪ್ಪರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಹಾದಿ ಸುಲಭವಾಗಿ ಏನೂ ಇಲ್ಲ. ಅವರ ಮುಂದೆ ಸವಾಲುಗಳು ಇವೆ.

Related