ಕೊರೋನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಮುಖ್ಯ

ಕೊರೋನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಮುಖ್ಯ

ಕಾರವಾರ : ಅನ್ಯ ರಾಜ್ಯಗಳಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬಂದAತಹ ಜನರಲ್ಲಿ ಕೊರೋನಾ ಸೋಂಕು ಕಂಡುಬರುತ್ತಿದೆ. ಹೀಗಾಗಿ ತಾಲೂಕು ಮಟ್ಟದ ಅಧಿಕಾರಿಗಳು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಎಚ್ಚರಿಕೆಯೊAದಿಗೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಸೂಚಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಆವರಣದಲ್ಲಿ ಜಿಲ್ಲೆಯ ಎಲ್ಲ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ಪೊಲೀಸ್ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಕೇವಲ ಒಬ್ಬ ಅಧಿಕಾರಿ ಅಥವಾ ಇಲಾಖೆಯಿಂದ ನಿಭಾಯಿಸಲು ಸಾಧ್ಯವಿಲ್ಲ. ಅಧಿಕಾರಿಗಳ ತಂಡ ರಚಿಸಿ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಅತಿ ಹೆಚ್ಚು ಕೋವಿಡ್-19 ಸೋಂಕಿತರನ್ನು ಹೊಂದಿರುವAತಹ ಅನ್ಯ ರಾಜ್ಯಗಳಿಂದ ಬಂದ ಜನರಿಗೆ ಪ್ರತ್ಯೇಕ ಕ್ವಾರಂಟೈನ್ ವ್ಯವಸ್ಥೆಯಾಗಬೇಕು.  ಇನ್ನು ಎರಡು ದಿನಗಳೊಗಾಗಿ ಕ್ವಾರಂಟೈನ್‌ನಲ್ಲಿರುವವರ ಸಮೀಕ್ಷೆ ನಡೆಸಿ,  ಹೋಂ ಕ್ವಾರಂಟೈನ್‌ದಲ್ಲಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ಹೋಂ ಕ್ವಾರಂಟೈನ್‌ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಲ್ಲಿ ಅಂತಹವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

 

 

 

Related