ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣು

ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣು

ಮೈಸೂರು : ಮುಖ್ಯಮಂತ್ರಿ ಬದಲಾವಣೆ ಅನ್ನೋದು ಕೇವಲ ವಿಪಕ್ಷಗಳ ಸೃಷ್ಟಿ. ಇದನ್ನು ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಅದರ ಮೇಲೆ ಕಣ್ಣು. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ” ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಈ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ, “ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹತ್ತತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಅವರ ಭ್ರಮೆ ಅಷ್ಟೇ” ಎಂದು ದೂರಿದರು.

ಗೆದ್ದವರು ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ ಎಂದರು.

“ಯಡಿಯೂರಪ್ಪನವರ ಸಂಪುಟದಲ್ಲಿ ಮಂತ್ರಿಯಾಗಲ್ಲ ಅಂತ ಯತ್ನಾಳ್ ಹೇಳಿದ್ದಾರೆ. ಅವರನ್ನು ಮಂತ್ರಿ ಮಾಡುವುದು ಬಿಡುವುದು ಮುಖ್ಯಮಂತ್ರಿ ಗಳಿಗೆ ಬಿಟ್ಟಿದ್ದು. ಒಂದು ವೇಳೆ ಕೇಂದ್ರ ನಾಯಕರು ಹಾಗೂ ಮುಖ್ಯಮಂತ್ರಿಗಳು ಮಂತ್ರಿ ಮಾಡುತ್ತೇವೆ ಅಂದರೆ ಅದನ್ನು ಅವರು ಒಪ್ಪಿಕೊಳ್ಳಬೇಕು” ಎಂದು ಹೇಳಿದರು.

2023ಕ್ಕೆ ಹೆಚ್.ಡಿ. ಕುಮಾರಸ್ವಾಮಿಯವರು ಮತ್ತೆ ಸಿಎಂ ಆಗುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಆಗುತ್ತೇನೆ ಅಂತಿದ್ದಾರೆ. ಇವರಿಬ್ಬರದು ಹಗಲು ಕನಸು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ” ಎಂದು ಈಶ್ವರಪ್ಪ ಹೇಳಿದರು.

Related