ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹ

ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಧಾರವಾಡ : ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬೆಳಗಾವಿಯ ಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಚಕ್ಕಡಿ ಏರಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಗಾಂಧಿನಗರದಿಂದ ನವಲೂರು ಸೇತುವೆವರೆಗೂ ಚಕ್ಕಡಿ ಏರಿ ಪ್ರತಿಭಟನಾ ಮೆರವಣಿಗೆ ಕೈಗೊಂಡ ಸತೀಶ ಜಾರಕಿಹೊಳಿ ಜೊತೆ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಪಾಲ್ಗೊಂಡಿದ್ದರು.

ಅತಿವೃಷ್ಟಿಯಿAದ ರಾಜ್ಯದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಇದರ ಮಧ್ಯೆ ದಿನದಿಂದ ದಿನಕ್ಕೆ ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದು,

ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂಧನದ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಸತೀಶ ಜಾರಕಿಹೊಳಿ ಒತ್ತಾಯಿಸಿದರು.

Related