ಕುರಿಗಳ ಜೊತೆ ರೈತಸಂಘ ಪ್ರತಿಭಟನೆ

ಕುರಿಗಳ ಜೊತೆ ರೈತಸಂಘ ಪ್ರತಿಭಟನೆ

ಬಂಗಾರಪೇಟೆ: ಇತ್ತೀಚೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಕರೆ ನೀಡಿದ್ದ, ಕರ್ನಾಟಕ ಬಂದ್‌ನಲ್ಲಿ ಕತ್ತೆಗಳನ್ನ ಹಿಡಿದು ಪ್ರತಿಭಟನೆ ನಡೆಸಿದ್ದ, ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಸಂಘಟನೆ, ಇದೀಗ ಮತ್ತೊಂದು ವಿಭಿನ್ನ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಹಿಂದಿನ ತಹಶೀಲ್ದಾರ್ ಚಂದ್ರಮೌಳೀಶ್ವರ ಅವರ ಹತ್ಯೆ ನಂತರ, ಸರ್ಕಾರ ಬೇರೊಬ್ಬರನ್ನ ನೇಮಿಸಿಲ್ಲ. ಹೀಗಾಗಿ ಕಚೇರಿಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು, ಕೆರೆಗಳ ಒತ್ತುವರಿ ತೆರವು ಮಾಡಲು ಯಾರೂ ಸಹ ಮುಂದಾಗಿಲ್ಲ. ಒಂದು ವಾರದಲ್ಲಿ ಬೇಡಿಕೆ ಈಡೇರದೆ ಹೋದಲ್ಲಿ ಬಂಗಾರಪೇಟೆ ಬಂದ್ ಕರೆ ನೀಡುವುದಾಗಿ, ರೈತಸಂಘದ ಮುಖಂಡ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಬಂಗಾರಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿನ, ಡಾ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ತಾಲೂಕು ಕಚೇರಿವರೆಗೂ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ರಸ್ತೆಯುದ್ದಕ್ಕೂ ನೂರಾರು ಕಾಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನ ಕೂಗಿದರು.
ತಾಲೂಕು ಕಚೇರಿ ಎದುರು ಕುರಿಗಳ ಸಮೇತ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೂಡಲೇ ಬಂಗಾರಪೇಟೆ ತಾಲೂಕಿನಲ್ಲಿ ಒತ್ತುವರಿಯಾಗಿರುವ ಕೆರಗೆಳನ್ನ ತೆರವು ಮಾಡಬೇಕೆಂದು ಆಗ್ರಹಿಸಿದರು. ಮೂರು ದಿನಗಳ ಕಾಲ ದಟ್ಟ ಅರಣ್ಯದಲ್ಲಿ ಕಳೆದ ವೃದ್ಧ; ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಘಟನೆ

Related