Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ: ಡಿಸಿಎಂ
  • Bangalore
  • Politics
  • State

ಫೆ. 25ರಂದು ಕೇಂದ್ರ ಜಲಶಕ್ತಿ ಸಚಿವರ ಭೇಟಿ: ಡಿಸಿಎಂ

admin February 19, 2025 1 minute read
Spread the love

ಉದಯಪುರ: ಕೇಂದ್ರ ಜಲಶಕ್ತಿ ಸಚಿವರು ಇದೇ ಫೆ. 25ರಂದು ಭೇಟಿಗೆ ಸಮಯಾವಕಾಶ ನೀಡಿದ್ದು, ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸುತ್ತೇನೆ. ನಮ್ಮ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಉದಯಪುರದಲ್ಲಿ ಕೆಂದ್ರ ಜಲಶಕ್ತಿ ಸಚಿವಾಲಯದಲ್ಲಿ ನಡೆಸುತ್ತಿರುವ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಇಂದು (ಬುಧವಾರ ಫೆ. 19) ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಿ, ಈ ಹಿಂದೆ ಘೋಷಿಸಲಾಗಿರುವ ಅನುದಾನ ಹಾಗೂ ಮಹದಾಯಿ, ಮೇಕೆದಾಟು ಹಾಗೂ ಕೃಷ್ಮಾ ಮೇಲ್ದಂಡೆ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸಮ್ಮೇಳನ ಎಲ್ಲಾ ರಾಜ್ಯಗಳ ಸಚಿವರುಗಳನ್ನು ಒಗಗೂಡಿಸಿದೆ. ಎಲ್ಲಾ ರಾಜ್ಯಗಳ ಅತ್ಯುತ್ತಮ ನೀರಾವರಿ ವ್ಯವಸ್ಥೆಗಳ ಪರಿಚಯವಾಗುತ್ತಿದೆ. ಇದರ ಜತೆಗೆ ನಮ್ಮಲ್ಲಿರುವ ಸಮಸ್ಯೆಗಳನ್ನು ಅರಿತು, ಅವುಗಳನ್ನು ಕೇಂದ್ರ ಜಲಶಕ್ತಿ ಸಚಿವಾಲಯದ ಮುಂದೆ ಇಡಬಹುದಾಗಿದೆ. ನೀರನ್ನು ಸಂರಕ್ಷಿಸಬೇಕು, ಮರುಬಳಕೆ ಮಾಡಬೇಕು. ಎಂಬುದು ಈ ಸಮ್ಮೇಳನದ ಉದ್ದೇಶ. ನಮ್ಮ ಯೋಜನೆಗಳನ್ನು ರಾಜಕೀಯ ಉದ್ದೇಶದಿಂದ ನೋಡಬೇಡಿ, ಸಮಸ್ಯೆಗಳನ್ನು ಬಗೆಹರಿಸಬೇಕು. ರಾಜ್ಯಗಳ ನಡುವಣ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಡಾ.ಗೋ.ಹ.ನರೇಗಲ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಈ ಸಮ್ಮೇಳನದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಸಚಿವರುಗಳ ಜತೆ ಚರ್ಚೆ ಮಾಡಿದ್ದು, ತುಂಗಭದ್ರಾ ನದಿಯ 30 ಟಿಎಂಸಿ ನೀರನ್ನು ಉಳಿಸಿ, ಸದ್ಬಳಕೆ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ಮಾಡಲು ವಿಜಯವಾಡಕ್ಕೆ ಹೋಗಿ ಮತ್ತೊಮ್ಮ ಚರ್ಚೆ ಮಾಡುತ್ತೇನೆ. ಇದಕ್ಕಾಗಿ ಮೂರು ರಾಜ್ಯಗಳ ಸೇರಿ ಕಾರ್ಯತಂತ್ರ ರೂಪಿಸಬೇಕಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಡಾ.ಗೋ.ಹ.ನರೇಗಲ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
Next: ಸರ್ಕಾರ ಗುತ್ತಿಗೆದಾರರ ಬದುಕು ಸರ್ವನಾಶ ಮಾಡುತ್ತಿದೆ   

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.