ಮೆಂತ್ಯದಲ್ಲಡಗಿದೆ ಆರೋಗ್ಯದ ಗೂಟ್ಟು..!

ಮೆಂತ್ಯದಲ್ಲಡಗಿದೆ ಆರೋಗ್ಯದ ಗೂಟ್ಟು..!

ಮೆಂತ್ಯ ಸೊಪ್ಪು ಯಾರಿಗೆ ಗೊತ್ತಿಲ್ಲ ಹೇಳಿ ಮೆಂತ್ಯ ಸೊಪ್ಪಿನಲ್ಲಿ ವಿವಿಧ ರೀತಿಯ ಆರೋಗ್ಯಕರ ಲಾಭಗಳಿದ್ದು ಇದನ್ನು ಅಡವಿಯಲ್ಲಿ ಬಳಸುವುದರಿಂದ ನಮ್ಮ ದೇಹಕ್ಕೆ ಹಲವಾರು ರೀತಿಯ ಪ್ರಯೋಜನಗಳಾಗುತ್ತವೆ.

ಇನ್ನು ಮೆಂತ್ಯ ಎಲ್ಲಾ ಅಡುಗೆಮನೆಯಲ್ಲಿ ಬಳಸುವ ಅತ್ಯಂತ ಜನಪ್ರಿಯ ಮಸಾಲೆಗಳಲ್ಲಿ ಒಂದು. ಈ ಮೆಂತ್ಯ ದೇಹಕ್ಕೆ ಆರೋಗ್ಯ ನೀಡುವ ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಮೂಲಿಕೆ ಎಂದೇ ಹೇಳಬಹುದು.  ಭಾರತೀಯ ಪಾಕಪದ್ಧತಿಯಲ್ಲಿ ಮತ್ತು ಆಯುರ್ವೇದ ಔಷಧದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಮೆಂತ್ಯವನ್ನು ನೀರಿನಲ್ಲಿ ನೆನೆಸಿ ತಯಾರಿಸಿದ ಮೆಂತ್ಯ ನೀರು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಮಧುಮೇಹ ಇರುವವರಿಗೆ ಇದು ತುಂಬಾನೇ ಉಪಯುಕ್ತವಾಗಿದೆ. ಇದು ಇತರ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಮೆಂತ್ಯವು ಕಬ್ಬಿಣ, ಮೆಗ್ನೀಸಿಯಮ್ ಮತ್ತು ಮ್ಯಾಂಗನೀಸ್ ಸೇರಿದಂತೆ ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಜೀರ್ಣಕ್ರಿಯೆಗೆ ಇದು ಸಹಕರಿಸುತ್ತದೆ.

ಮೆಂತ್ಯ ಕಾಳುಗಳು ಕರಗಬಲ್ಲ ಫೈಬರ್ ಮತ್ತು ಗ್ಯಾಲಕ್ಟೋಮನ್ನನ್ ನಂತಹ ಸಂಯುಕ್ತಗಳನ್ನು ಹೊಂದಿರುತ್ತವೆ. ಇದು ಕಾರ್ಬೋಹೈಡ್ರೇಟ್‌ಗಳು ಮತ್ತು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ. ಉತ್ತಮ ಫಲಿತಾಂಶಕ್ಕಾಗಿ ಮೆಂತ್ಯ ಬೀಜಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ ಮತ್ತು ಬೆಳಿಗ್ಗೆ ಈ ನೀರನ್ನು ಕುಡಿಯಬೇಕು.

ಮೆಂತ್ಯ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಎಲ್‌ಡಿಎಲ್ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

 

Related